ಬೀದರ್: ಜಿಲ್ಲೆಯಲ್ಲಿ ಗುಡುಗು ಸಹಿತ ಸುರಿದ ಮಳೆಯ ವೇಳೆ ಸಿಡಿಲು ಬಡಿದು ಯುವರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು 25 ವರ್ಷದ ರಾಹುಲ್ ಭಾಸ್ಕರ್ ಎಂದು ಗುರುತಿಸಲಾಗಿದೆ.
ರಾಹುಲ್ ಎಂದಿನಂತೆ ಕೃಷಿ ಚಟುವಟಿಕೆಗಳಿಗಾಗಿ ತಮ್ಮ ಜಮೀನಿಗೆ ತೆರಳಿದ್ದರು. ಈ ವೇಳೆ ಏಕಾಏಕಿ ಹವಾಮಾನ ಬದಲಾಗಿ ಸಿಡಿಲು ಸಹಿತ ಮಳೆ ಆರಂಭವಾಗಿದೆ. ಜಮೀನಿನಲ್ಲಿದ್ದ ರಾಹುಲ್ ಅವರಿಗೆ ನೇರವಾಗಿ ಸಿಡಿಲು ಬಡಿದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ರಾಹುಲ್ ಕುಟುಂಬದ ಪ್ರಮುಖ ಆಧಾರಸ್ತಂಭವಾಗಿದ್ದರು ಎನ್ನಲಾಗಿದೆ. ಯುವ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಬೀದರ್ ಜಿಲ್ಲೆಯ ಔರಾದ್, ಭಾಲ್ಕಿ ಸೇರಿದಂತೆ ಹಲವೆಡೆ ಇಂದು ಮುಂಜಾನೆ ಮಳೆಯಾದ ವರದಿಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


