nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    ತುಮಕೂರು April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    By adminApril 1, 2026No Comments1 Min Read
    draupadi murmu siddaganga matt

    ನಮ್ಮ ತುಮಕೂರು: ಶ್ರೀ ಶಿವಕುಮಾರ್ ಸ್ವಾಮೀಜಿಯವರು ಕೇವಲ ಒಬ್ಬ ಸಂತನಲ್ಲ, ಬದಲಾಗಿ ನಮ್ಮ ರಾಷ್ಟ್ರದ ಆತ್ಮಕ್ಕೆ ಸ್ವರೂಪ ನೀಡಿದ ಮಹಾನ್ ಚೇತನ. ಅವರ ಭೌತಿಕ ಶರೀರ ಇಂದು ನಮ್ಮೊಂದಿಗಿಲ್ಲದಿದ್ದರೂ, ಅವರ ಅಧ್ಯಾತ್ಮಿಕ ಶಕ್ತಿ ಸಮಾಜವನ್ನು ಸದಾ ಮುನ್ನಡೆಸುತ್ತಿದೆ ಎಂದು ಭಾರತದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಸ್ಮರಿಸಿದರು.

    ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ್ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ ಹಾಗೂ ಗುರು ವಂದನಾ ಕಾರ್ಯಕ್ರಮದ ಅಂಗವಾಗಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅವರು ಮೊದಲು ಶ್ರೀ ಶಿವಕುಮಾರ್ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ನಮನಗಳನ್ನು ಅರ್ಪಿಸಿದರು. ನಂತರ ಮಠದ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಶ್ರೀಗಳ ಸಾಮಾಜಿಕ ಮತ್ತು ಶೈಕ್ಷಣಿಕ ಕ್ರಾಂತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.


    Provided by
    Provided by

    ಸಿದ್ದಗಂಗಾ ಮಠವು ಸಾವಿರಾರು ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಶಿಕ್ಷಣ, ವಸತಿ ಮತ್ತು ಅನ್ನದಾಸೋಹವನ್ನು ನೀಡುತ್ತಿರುವುದು ಶ್ಲಾಘನೀಯ. “ಶಿಕ್ಷಣವೇ ಅಭಿವೃದ್ಧಿಯ ಕನ್ನಡಿ” ಎಂಬ ಶ್ರೀಗಳ ತತ್ವದಂತೆ ಮಠವು ಪ್ರಾಥಮಿಕ ಶಾಲೆಯಿಂದ ಹಿಡಿದು ಇಂಜಿನಿಯರಿಂಗ್‌ ವರೆಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದರು.

    ಬಸವಣ್ಣನವರ ‘ಕಾಯಕವೇ ಕೈಲಾಸ’ ತತ್ವದಂತೆ ಶ್ರೀಗಳು ತಮ್ಮ ಜೀವನದುದ್ದಕ್ಕೂ ಶ್ರಮಿಸಿದ್ದಾರೆ. ಅವರ ಹಾದಿಯಲ್ಲಿ ನಡೆಯುತ್ತಿರುವ ಸಿದ್ದಗಂಗಾ ಮಠವು ಇಂದು ಕರುಣಾ ಗಂಗೆಯಾಗಿ ಹರಿಯುತ್ತಿದೆ ಎಂದು ಬಣ್ಣಿಸಿದರು.

    ರಾಷ್ಟ್ರಕವಿ ಕುವೆಂಪು ಅವರ ‘ಜಯ ಭಾರತ ಜನನಿಯ ತನುಜಾತೆ’ ಹಾಡನ್ನು ನೆನೆದ ರಾಷ್ಟ್ರಪತಿಗಳು, ಕರ್ನಾಟಕವು ಭಾರತ ಮಾತೆಯ ಹೆಮ್ಮೆಯ ಪುತ್ರಿ ಎಂದು ಬಣ್ಣಿಸಿದರು. ನಾಡಿನ ಸಂಸ್ಕೃತಿ ಮತ್ತು ಅಧ್ಯಾತ್ಮವು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದರು. ಕನ್ನಡದಲ್ಲೇ ತಮ್ಮ ಭಾಷಣವನ್ನು ಅವರು ಆರಂಭಿಸುವ ಮೂಲಕ ಗಮನ ಸೆಳೆದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.