nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    ತುಮಕೂರು April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    By adminApril 1, 2026No Comments2 Mins Read
    h v venkatesh

    ತುಮಕೂರು: ಗುಣಮಟ್ಟದ ಹಾಲು ಶೇಖರಣೆ ಮಾಡುತ್ತಿರುವ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸಿದೆ ಎಂದು ತುಮಕೂರು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಮತ್ತು ಪಾವಗಡ ಶಾಸಕರಾದ ಎಚ್.ವಿ.ವೆಂಕಟೇಶ್ ಹೇಳಿದರು.

    ತಾಲ್ಲೂಕಿನ ಅರೇಮಲ್ಲೇನಹಳ್ಳಿ ರಂಗನಾಥ ಸ್ವಾಮಿ ಬೆಟ್ಟದಲ್ಲಿ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ, ಜಿಲ್ಲಾ ರೈತರ ಮತ್ತು ಎಂ.ಪಿ.ಸಿ.ಎಸ್ ನೌಕರರ ಮತ್ತು ಸಾಮಾನ್ಯ ಕಲ್ಯಾಣ ಟ್ರಸ್ಟ್ ಮಲ್ಲಸಂದ್ರ, ತುಮಕೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಆದಿಚುಂಚನಗಿರಿ ಆಸ್ಪತ್ರೆ, ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಅರೇಮಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ನಡೆದ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.


    Provided by
    Provided by

    ತಾಲೂಕಿನ ಹಾಲು ಸಹಕಾರ ಸಹಕಾರ ಸಂಘಗಳ ನಿರ್ದೇಶಕರೂ, ಹಾಲಿ ಕೆಎಂಎಫ್ ನ ನಿರ್ದೇಶಕರಾಗಿರುವ ಸಿ.ವಿ.ಮಹಲಿಂಗಯ್ಯನವರು ಹಾಲು ಸಹಕಾರ ಸಂಘದಲ್ಲಿ ಉತ್ತಮ ತಾಲೂಕಿನಲ್ಲಿ ಉತ್ತಮ ಹೆಸರುಗಳಿಸಿದ್ದಾರೆ. ಅವರನ್ನೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಯಾಂಡಿಡೇಟ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರೂ, ಗೃಹಸಚಿವರೂ ಆಗಿರುವ ಡಾ. ಜಿ. ಪರಮೇಶ್ವರ್ ಮತ್ತು ಮಾಜಿ ಸಚಿವರಾದ ಕೆ.ಎನ್. ರಾಜಣ್ಣನವರು ಇಚ್ಛಿಸಿದ್ದಾರೆ ಎಂದು ಶಾಸಕ ವೆಂಕಟೇಶ್ ವೇದಿಕೆಯಲ್ಲಿ ಹೇಳಿ ಎಲ್ಲರ ಹುಬ್ಬೇರುವಂತೆ ಮಾಡಿದರು.

    ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, ರೈತರಿಗೆ ಹೈನುಗಾರಿಕೆ ವರದಾನವಾಗಿದೆ. ನಮ್ಮ ತಾಲೂಕನ್ನು ಕಲ್ಪತರು ನಾಡೆಂದು ಕರೆಯಲಾಗುತ್ತದೆ. ಆದರೆ ಇತ್ತೀಚೆಗೆ ತೆಂಗಿನ ಮರಕ್ಕೆ ವಿವಿಧ ರೋಗಗಳು ಬಂದು ತೆಂಗು ಬೆಳೆ ಕಡಿಮೆಯಾಗಿದೆ. ತೆಂಗು ಮತ್ತು ಕೊಬ್ಬರಿಯ ಬೆಲೆ ಹೆಚ್ಚಾಗಿದ್ದರೂ ಸಹ ಕಡಿಮೆ ಬೆಳೆ ಬರುತ್ತಿರುವ ಹಿನ್ನೆಲೆಯಲ್ಲಿ ರೈತರು ಹೈರಾಣಾಗಿದ್ದಾರೆ. ಈಗ ಹೈನುಗಾರಿಕೆ ರೈತರಿಗೆ ಕಲ್ಪವೃಕ್ಷವಾಗಿದೆ. ಉತ್ತಮವಾದ ಹಾಲು ಹಾಕಿದರೆ ಉತ್ತಮ ಬೆಲೆ ದೊರೆಯುತ್ತಿದೆ. ಈ ಹೈನುಗಾರಿಕೆ ಇಲ್ಲದಿದ್ದರೆ ರೈತರ ಪಾಡು ಶೋಚನೀಯವಾಗುತ್ತಿತ್ತು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

    ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧಾ ವಿಜೇತರಿಗೆ ಮತ್ತು ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ ನಡೆಸಿ ಬಹುಮಾನ ನೀಡಲಾಯಿತು. ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಸಹ ನಡೆಯಿತು. ನೂರಾರು ರೈತರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

    ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ರಮೇಶ್ ಗೌಡ, ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ತ್ಯಾಗರಾಜು, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ಪ್ರೊ.ಪುಟ್ಟರಂಗಪ್ಪ, ರಾಮೇಗೌಡ, ಸ್ವಾಮಿ, ಸಿದ್ದಗಂಗಾ ಆಸ್ಪತ್ರೆ ವೈದ್ಯರಾದ ಜೆ.ಎಂ.ಅಭಿಜ್ಞಾ ಮಧುಸ್ವಾಮಿ, ಡಾ.ಶರಣ್, ತುಮುಲ್ ವ್ಯವಸ್ಥಾಪಕ ಜಿ.ಶ್ರೀನಿವಾಸನ್, ಶಿವಪ್ರಸಾದ್, ಬಿ.ಶ್ರೀನಿವಾಸ್, ಚಂದ್ರಶೇಖರ ಕೆದನೂರು, ಅರೇಮಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎ.ಬಿ.ಜಗದೀಶ್, ಉಪ ವ್ಯವಸ್ಥಾಪಕ ಡಾ. ದೀಕ್ಷಿತ್, ತಾಲೂಕು ಮುಖ್ಯಸ್ಥ ಮಂಜುನಾಥ್, ವಿಸ್ತರಣಾಧಿಕಾರಿಗಳಾದ ದಿವಾಕರ್, ಕಿರಣ್ ಕುಮಾರ್, ಸುನಿಲ್ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಹಾಗೂ ಅರೇಮಲ್ಲೇನಹಳ್ಳಿ ಗ್ರಾಮಸ್ಥರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.