ಗಂಗಾವತಿ: ಕಳ್ಳರ ರೀತಿಯಲ್ಲಿ ತಡರಾತ್ರಿ ಸಮಯದಲ್ಲಿ ಮನೆಯ ಗೋಡೆ–ಕಂಪೌಂಡ್ ಹಾರಿ ಬಂದು ಮನೆಯ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ವಿಕೃತನೊಬ್ಬ ಲಾಕ್ ಆಗಿದ್ದಾನೆ.
ಇಲ್ಲಿನ ಬನ್ನಿಗಿಡದ ಕ್ಯಾಂಪಿನ ಪ್ರತಿಷ್ಠಿತರ ಮನೆಗಳಿಗೆ ರಾತ್ರಿ ವೇಳೆ ಕಳ್ಳರಂತೆ ಬಂದು ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಮಹಿಳೆಯರ ಒಳ ಉಡುಪುಗಳನ್ನು ಕದ್ದುಕೊಂಡು ಹೋಗಿ ಜನರ ಕೈಗೆ ಸಿಗದೇ ಚಳ್ಳೆಹಣ್ಣು ತಿನ್ನಿಸುತ್ತಿದ್ದ ವಿಕೃತ ಮನಸ್ಸಿನ ವ್ಯಕ್ತಿ ಈಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಬಂಧಿತ ಆರೋಪಿಯನ್ನು ಎಪಿಎಂಸಿಯ ಹಮಾಲರ ಕಾಲೋನಿಯ ದಾದಾಸಾಬ್ ಯಮನೂರಸಾಬ ಎಂದು ಗುರುತಿಸಲಾಗಿದೆ.
22 ವರ್ಷದ ಈ ಯುವಕ, ಮನೆಗಳಿಗೆ ನುಗ್ಗಿ ಬಟ್ಟೆ ಕಳ್ಳತನ ಮಾಡುತ್ತಿರುವ ಕೃತ್ಯ ಮನೆಗಳಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಆರೋಪಿಯ ಶೋಧ ಕಾರ್ಯದಲ್ಲಿ ತೊಡಗಿದ್ದರು.
ಸೋಮವಾರ ತಡರಾತ್ರಿ ಮತ್ತೆ ಗಣ್ಯ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಈ ಯುವಕನನ್ನು ಮನೆಯವರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಕೊಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


