ಬೆಂಗಳೂರು: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ‘ಓಂಬುಡ್ಸ್‌ಮನ್’ (Ombudsman) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ವಿವರಗಳು:
ಹುದ್ದೆಯ ಹೆಸರು: ಓಂಬುಡ್ಸ್‌ಮನ್ (Ombudsman)
ವೇತನ: ಮಾಸಿಕ ಕನಿಷ್ಠ 10,000 ರೂ. ನಿಂದ ಗರಿಷ್ಠ 45,000 ರೂ. ವರೆಗೆ (ಅನುಭವ ಮತ್ತು ಮಾನದಂಡಗಳ ಆಧಾರದ ಮೇಲೆ).
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 1 ಮಾರ್ಚ್ 2026 ಕ್ಕೆ ಅನ್ವಯವಾಗುವಂತೆ 66 ವರ್ಷಗಳ ಒಳಗೆ ಇರಬೇಕು.
ಅರ್ಜಿ ಸಲ್ಲಿಕೆ ವಿಧಾನ:
ಈ ಹುದ್ದೆಗಳಿಗೆ ಆಫ್‌ಲೈನ್ (Offline) ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು (ಶೈಕ್ಷಣಿಕ ಪ್ರಮಾಣಪತ್ರ, ವಯಸ್ಸಿನ ಪುರಾವೆ, ಅನುಭವದ ಪತ್ರ ಇತ್ಯಾದಿ) ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ಸಂಖ್ಯೆ: 1234, ಕೆಎಸ್‌ಐಐಡಿಸಿ ಕಟ್ಟಡ, ಐಟಿ ಪಾರ್ಕ್ ಸೌತ್ ಬ್ಲಾಕ್, ರಾಜಾಜಿನಗರ ಕೈಗಾರಿಕಾ ಎಸ್ಟೇಟ್, ಬೆಂಗಳೂರು — 560010.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 24, 2026.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


