nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: 100 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ; ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ
    ತುಮಕೂರು April 3, 2026

    ತುಮಕೂರು: 100 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ; ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ

    By adminApril 3, 2026No Comments2 Mins Read
    parameshwar

    ತುಮಕೂರು: ಜಿಲ್ಲೆಯಲ್ಲಿ ತೀವ್ರ ಬೇಸಿಗೆಯ ಬಿಸಿ ಏರುತ್ತಿರುವ ಹಿನ್ನೆಲೆಯಲ್ಲಿ, ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ 100 ಹಳ್ಳಿಗಳಿಗೆ ತಕ್ಷಣವೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

    ನಗರದ ಸ್ಮಾರ್ಟ್ ಸಿಟಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.


    Provided by
    Provided by

    ಪಾವಗಡ ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ 100 ಹಳ್ಳಿಗಳನ್ನು ಪಟ್ಟಿ ಮಾಡಲಾಗಿದೆ. ಈ ಹಳ್ಳಿಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ಮತ್ತು ಖಾಸಗಿ ಬೋರ್‌ ವೆಲ್‌ ಗಳನ್ನು ಬಾಡಿಗೆಗೆ ಪಡೆಯುವ ಮೂಲಕ ನೀರು ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ  ಎಂದರು.

    ಟ್ಯಾಂಕರ್ ಅಥವಾ ಖಾಸಗಿ ಮೂಲಗಳಿಂದ ನೀರು ಸಿಗದಿದ್ದಲ್ಲಿ, ತುರ್ತಾಗಿ ಹೊಸ ಬೋರ್‌ ವೆಲ್ ಕೊರೆಯಲು ಅಧಿಕಾರಿಗಳಿಗೆ ಅನುಮತಿ ನೀಡಲಾಗಿದೆ. ಬೋರ್‌ ವೆಲ್ ಕೊರೆಸಲು ಬೇಕಾದ ಅನುಮತಿಯನ್ನು ಜಿಲ್ಲಾಧಿಕಾರಿ ಅಥವಾ ಜಿಪಂ ಸಿಇಒ ಅವರು ವಿಳಂಬವಿಲ್ಲದೆ ನೀಡಬೇಕು ಹಾಗೂ ಬೆಸ್ಕಾಂ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.

    ತುಮಕೂರು ನಗರದ ಕುಡಿಯುವ ನೀರಿನ ಅಗತ್ಯಕ್ಕಾಗಿ ಹೇಮಾವತಿ ಜಲಾಶಯದಿಂದ ಕನಿಷ್ಠ 2 ಟಿಎಂಸಿ ನೀರು ಹರಿಸುವಂತೆ ಹಾಸನ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲೇ ಈ ಕುರಿತು ಸರ್ಕಾರಕ್ಕೆ ಅಧಿಕೃತ ಮನವಿ ಸಲ್ಲಿಸಲಾಗುವುದು. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕನಿಷ್ಠ ಎರಡು ದಿನಕ್ಕೊಮ್ಮೆಯಾದರೂ ಸಾರ್ವಜನಿಕರಿಗೆ ನೀರು ಪೂರೈಸುವಂತೆ ಸ್ಥಳೀಯ ಸಂಸ್ಥೆಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.

    ಬೇಸಿಗೆಯಿಂದ ತೋಟಗಾರಿಕೆ ಬೆಳೆಗಳು ಒಣಗುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಸಚಿವರು, “ಸರ್ಕಾರ ಯಾವಾಗಲೂ ರೈತರ ಪರವಾಗಿದೆ. ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು, ರೈತರು ಆತಂಕಕ್ಕೆ ಒಳಗಾಗಬಾರದು” ಎಂದು ಧೈರ್ಯ ತುಂಬಿದರು.

    ಇದೇ ಸಂದರ್ಭದಲ್ಲಿ ಶಿರಾ ತಾಲೂಕಿನಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮತ್ತು 1,800 ಮನೆಗಳ ಹಂಚಿಕೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಭರವಸೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮತ್ತು ಜಿಪಂ ಸಿಇಒ ಬಿ.ವಿ. ಅಶ್ವಿಜ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ

    April 5, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.