ತುಮಕೂರು: ಟೆಂಪಲ್ ನಗರದ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ಎಂಬ ಅಧಿಕಾರಿಯ ವಿರುದ್ಧ ಗುತ್ತಿಗೆದಾರರನ್ನು ಅಸಭ್ಯ ಶಬ್ದಗಳಿಂದ ನಿಂದಿಸಿ ದರ್ಪ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ ಹಾಗೂ ಆ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ಸಿ. ರಾಜೇಶ್ ಮಾತನಾಡಿ, ನಿಗಮದ ವಿಭಾಗಾಂತರದ ವಿವಿಧ ಕೆಲಸಗಳ ಅಡಿಯಲ್ಲಿ ತಪಾಸಣೆ ಪಡೆದ ವಿದ್ಯುತ್ ಗುತ್ತಿಗೆದಾರರು ಅತಿ ಅಲ್ಪಾವಧಿಯ ತಪಾಸಣೆ ಅಂದರೆ 31 ರಂದು ತಪಾಸಣೆ ಕಾರ್ಯ ಮುಗಿಸಿ ಲಾಗಿನ್ ಮಾಡಲು ಹೋದಾಗ ವಿಷಯದ ಬಗ್ಗೆ ವಿಚಾರಿಸಿಕೊಂಡು ಕೆಲಸಕ್ಕಾಗಿ ಹೋದಾಗ ಅಲ್ಲಿನ ಅಧಿಕಾರಿ ದರ್ಶನ್ ಅವರು ಅಸಭ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಆದ್ದರಿಂದ ಈ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಎಂದು ಹೇಳಿದರು.
ಈ ಸಂಬಂಧ ಅಧಿಕಾರಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವಿಭಾಗದ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಪೊಲೀಸ್ ಕಂಪ್ಲೇಂಟ್ ಸಹ ನೀಡಲಾಗಿದೆ. ಗುತ್ತಿಗೆದಾರರ ಮೇಲೆ ದರ್ಪ ಪ್ರದರ್ಶಿಸಿದ ಅಧಿಕಾರಿ ದರ್ಶನ್ ಅವರನ್ನ ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು. ವಿದ್ಯುತ್ ಗುತ್ತಿಗೆದಾರರ ವಿರುದ್ಧದ ದರ್ಪ ಮತ್ತು ಭ್ರಷ್ಟಾಚಾರ ನಾವು ಸತತವಾಗಿ ಅನುಭವಿಸುತ್ತಿದ್ದೇವೆ. ನಮ್ಮ ಕೆಲಸಗಳಿಗೆ ಸಕಾಲಕ್ಕೆ ಸ್ಪಂದಿಸದೆ ಮತ್ತು ಸೌಜನ್ಯದಿಂದ ಮಾತಾಡದೆ ವಿಭಾಗೀಯ ಕಚೇರಿ ಅಧಿಕಾರಿಗಳು ಅಸಹಕಾರ ನೀಡುತ್ತಿದ್ದಾರೆ. ಗುತ್ತಿಗೆದಾರರೊಂದಿಗೆ ಸೌಜನ್ಯದಿಂದ ಮಾತಾಡಬೇಕೆಂದು ಒತ್ತಾಯಿಸಿದರು.
ಗುತ್ತಿಗೆದಾರರ ಸಂಘದ ಮುಖಂಡ ಮಹದೇವಪ್ಪ ಮಾತನಾಡಿ, ಟೆಂಪಲ್ ಕಚೇರಿಯ ಕೆಲವು ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಸೌಜನ್ಯದಿಂದ ಇರುವುದಿಲ್ಲ. ದರ್ಶನ್ ಅವರು ಗುತ್ತಿಗೆದಾರರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಖಂಡನೀಯ. ಕೂಡಲೇ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಹಿಂದೆ ಟೆಂಪಲ್ ಕಚೇರಿಯ ಬಗ್ಗೆ ಹಲವಾರು ದೂರುಗಳು ಕೇಳಿ ಬರುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕು. ದರ್ಶನ್ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ರಾಜ್ಯಾದ್ಯಂತ ಇರುವ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್, ಸಂಘದ ಪದಾಧಿಕಾರಿಗಳಾದ ವೀರಭದ್ರಪ್ಪ, ಕಾರ್ಯದರ್ಶಿ ಪವಿತ್ರ ಕುಮಾರ್ ಕೆ.ಎನ್., ರಂಗಸ್ವಾಮಿ, ನಾಗರಾಜು, ಪ್ರದೀಪ್ ಕುಮಾರ್ ಸೇರಿದಂತೆ ಪ್ರತಿಭಟನಾ ನೇತೃತ್ವ ವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


