ತುಮಕೂರು: ಪ್ರಸ್ತುತ ದಿನಗಳಲ್ಲಿ ಬಹಳಷ್ಟು ಜನರು ಮೇಲ್ನೋಟಕ್ಕೆ ಆರೋಗ್ಯವಂತರಾಗಿ ಕಂಡರೂ, ಒಳಗಿನಿಂದ ಮಾನಸಿಕವಾಗಿ ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಚ್. ನಿಂಗಪ್ಪ ಕಳವಳ ವ್ಯಕ್ತಪಡಿಸಿದ್ದಾರೆ.
ತುಮಕೂರು ತಾಲ್ಲೂಕಿನ ಹೊನ್ನುಡಿಕೆಯಲ್ಲಿ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ನರ ಮತ್ತು ಮನೋರೋಗ ಚಿಕಿತ್ಸೆ ಹಾಗೂ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸೇಜಲ್ ನ್ಯೂ ಲೈಫ್ ಫೌಂಡೇಷನ್ ಹಾಗೂ ಸ್ನೇಹ ಮನೋವಿಕಾಸ ಕೇಂದ್ರದ ಸಹಯೋಗದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿತ್ತು. ಗ್ರಾಮೀಣ ಭಾಗದ ಜನರಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಮತ್ತು ನರ ಸಂಬಂಧಿ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡುವುದು ಶಿಬಿರದ ಮುಖ್ಯ ಉದ್ದೇಶವಾಗಿತ್ತು.
ಜನರ ಆರೋಗ್ಯ ರಕ್ಷಣೆಯಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ. ಸಾರ್ವಜನಿಕರು ಇವುಗಳ ಪ್ರಯೋಜನ ಪಡೆದುಕೊಂಡು ಸುದೃಢ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ನಿಂಗಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ವೈದ್ಯರಾದ ಪದ್ಮಾಕ್ಷಿ ಲೋಕೇಶ್, ಚೇತನ್, ಠವಿಕುಮಾರ್ ಹಾಗೂ ಲೋಕೇಶ್ ಬಾಬು ಅವರು ಶಿಬಿರಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಸಲಹೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಕೆ.ಎ.ದಯಾನಂದ, ಸಿದ್ದೇಗೌಡ, ಕೆ.ಟಿ.ಸಿದ್ದರಂಗಯ್ಯ, ರಾಜು, ಶಿವರಾಜು, ಸಿ.ಟಿ.ಉಷಾ, ಆರ್.ಸುಮಾರಾಣಿ ಮತ್ತು ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


