ಗುಬ್ಬಿ: ತಾಲ್ಲೂಕಿನ ಎಂ.ಎನ್. ಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ಅಮಾನತು ಮಾಡುವಂತೆ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ ಮತ್ತು ಮುಖಂಡರು ಆಗ್ರಹಿಸಿದ್ದಾರೆ.
ಎಂ.ಎನ್. ಕೋಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ಹಾಗೂ ಇತರ ಸಹೋದ್ಯೋಗಿಗಳು ಮಾದಿಗ ಸಮಾಜದ ಆಹಾರ ಪದ್ಧತಿ ಮತ್ತು ಮಹಿಳಾ ಪಿ ಡಿ ಒ ಬಗ್ಗೆ ಅಗೌರವದಿಂದ ಮಾತನಾಡಿದ್ದು, ಮಹಿಳೆಯ ಬಗ್ಗೆ ತೇಜೋವಧೆ ಮಾಡಿದ್ದಾರೆ ಜೊತೆಗೆ ತಾಲೂಕು ಮಟ್ಟದ ಅಧಿಕಾರಿಯ ಬಗ್ಗೆ ಮಾದಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಯಾಗಿ ಮಾತನಾಡಿರುವ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದರಿಂದ ದಲಿತ ಸಮುದಾಯಕ್ಕೆ ಅವಮಾನವಾಗಿದೆ. ಪಂಚಾಯಿತಿ ಅಧಿಕಾರಿಗಳು ಕೂಡಲೇ ಅವರನ್ನು ಅಮಾನತು ಮಾಡಬೇಕು. ಇಲ್ಲವಾದರೆ ತಾಲೂಕು ಕಚೇರಿಯ ಹಾಗೂ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಲಕ್ಕೇನಹಳ್ಳಿ ನರಸೀಯಪ್ಪ, ಚೇಳೂರು ಬಸವರಾಜು, ಕುಂದುರನಹಳ್ಳಿ ನಟರಾಜ್, ಮಾರಶೆಟ್ಟಿಹಳ್ಳಿ ಬಸವರಾಜು, ಇತರ ದಲಿತ ಮುಖಂಡರು ಉಪಸ್ಥಿತರಿದ್ದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB