nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    ತುಮಕೂರು April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    By adminApril 8, 2026No Comments3 Mins Read
    dr g parameshwar
    ಗೃಹ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್

    ತುಮಕೂರು: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ತಾಲೂಕು ಮಟ್ಟದ ಜನತಾ ದರ್ಶನ–ಜನಸ್ಪಂದನ ಕಾರ್ಯಕ್ರಮ ಯಶಸ್ವಿಗೊಳಿಸಿದ ಬೆನ್ನಲ್ಲೇ ಇಂದು ಬೆಳಗ್ಗೆ 11ಕ್ಕೆ ಜಿಲ್ಲಾಮಟ್ಟದ ಬೃಹತ್ ಜನತಾದರ್ಶನ/ಜನಸ್ಪಂದನ ಕಾರ್ಯಕ್ರಮವನ್ನು ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಆಯೋಜಿಸಿದೆ.

    ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಲುವಾಗಿ ಹತ್ತು ಕೌಂಟರ್‌ ಗಳನ್ನು ಗ್ರಂಥಾಲಯ ಸಭಾಂಗಣದ ಕಾರಿಡಾರ್‌ ನಲ್ಲಿ ತೆರೆದಿದ್ದು, ಈ ಕೌಂಟರ್‌ ಗಳಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದಲ್ಲದೆ,  ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.


    Provided by
    Provided by

    ಕೌಂಟರ್‌ ಗಳಲ್ಲಿ ಇ–ಜಿಆರ್‌ ಎಸ್ ತಂತ್ರಾಂಶ ಒಳಗೊಂಡ ಡಾಟಾ ಎಂಟ್ರಿ, ಕಂಪ್ಯೂಟರ್ ವ್ಯವಸ್ಥೆ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗಿದ್ದು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಾರ್ಯಕ್ರಮ ರೂಪಿಸುವ ಸಂಬಂಧ ಆದೇಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಈಗಾಗಲೇ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಜಟಿಲ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಪ್ರಯತ್ನ ಮಾಡಲಾಗಿದೆ. ತಾಲೂಕು ಮಟ್ಟದ ಜನತಾ ದರ್ಶನದಲ್ಲಿ ಸುಮಾರು 2500 ಅರ್ಜಿಗಳು ಬಂದಿದ್ದು, ಇದರಲ್ಲಿ ಶೇ.15 ರಿಂದ 20ರಷ್ಟು ಅರ್ಜಿಗಳನ್ನು ಇತ್ಯರ್ಥಗೊಳಿಸಿ ಫಲಾನುಭವಿಗಳಿಗೆ ಪರಿಹಾರ ಕಲ್ಪಿಸಿರುವ ಬಗ್ಗೆ ಇಂದಿನ ಜನತಾ ದರ್ಶನ ಸಭೆಯಲ್ಲಿ ಘೋಷಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಎಲ್ಲಾ ತಹಸೀಲ್ದಾರ್, ಇಟಿಜಿಗಳಿಗೆ ನಿರ್ದೇಶಿಸಿದ್ದಾರೆ ಎಂದು ಎಡಿಸಿ ಡಾ. ತಿಪ್ಪೇಸ್ವಾಮಿ ತಿಳಿಸಿದ್ದಾರೆ.

    shubha kalyan
    ಜಿಲ್ಲಾಧಿಕಾರಿ ಶುಭ ಕಲ್ಯಾಣ್

    ಜನತಾದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾದ್ಯಂತ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕುಡಿಯುವ ನೀರು, ನೆರಳು, ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕು. ಜನತಾ ದರ್ಶನದಲ್ಲಿ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಹಾಜರಿದ್ದು, ಎಲ್ಲಾ ಇಲಾಖೆಗಳ ಮುಖ್ಯಸ್ಥರು ಪರಸ್ಪರ ಸಹಕಾರದೊಂದಿಗೆ ಸಾರ್ವಜನಿಕರಿಂದ ಬಂದಂತಹ ಅಹವಾಲುಗಳಿಗೆ ತಾರ್ಕಿಕ ಅಂತ್ಯ ಸಿಗುವಂತೆ ಕೆಲಸ ನಿರ್ವಹಿಸಬೇಕು. ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಲೋಪವಿಲ್ಲದೆ ನಿರ್ವಹಿಸಬೇಕು.

    —  ಶುಭಕಲ್ಯಾಣ್, ಜಿಲ್ಲಾಧಿಕಾರಿ.


    ಜಿಲ್ಲಾಮಟ್ಟದ ಜನತಾ ದರ್ಶನದ ಕೌಂಟರ್‌ಗಳು: ಇಲಾಖೆಗಳ ವಿವರ:

    ಕೌಂಟರ್ 1: ಕಂದಾಯ ಇಲಾಖೆ, ನೋಂದಣಿ-ಮುದ್ರಾಂಕ ಇಲಾಖೆ, ಭೂ ದಾಖಲೆಗಳ ಉಪನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು.

    ಕೌಂಟರ್ 2: ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಪಾಲನಾ ಇಲಾಖೆ, ಮೀನುಗಾರಿಕಾ ಇಲಾಖೆ, ಅರಣ್ಯ ಇಲಾಖೆ.

    ಕೌಂಟರ್ 3: ಪೊಲೀಸ್ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಇಲಾಖೆ (ಎಲ್ಲಾ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆ), ಬೆಸ್ಕಾಂ ಕೆಪಿಟಿಸಿಎಲ್.

    ಕೌಂಟರ್ 4: ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ದೇವರಾಜು ಅರಸು ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ.

    ಕೌಂಟರ್ 5: ಕಾನೂನು ಮತ್ತು ಮಾಪನ ಶಾಸ್ತ್ರ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಮಗ್ಗ ಜವಳಿ ಇಲಾಖೆ, ಅಂಚೆ ಇಲಾಖೆ, ಖಾದಿ-ಗ್ರಾಮೋದ್ಯೋಗ, ಸಾರಿಗೆ ಇಲಾಖೆ, ಅಬಕಾರಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ.

    ಕೌಂಟರ್ 6: ಮಾರ್ಗದರ್ಶಿ ಬ್ಯಾಂಕ್ (ಲೀಡ್ ಬ್ಯಾಂಕ್), ಸಹಕಾರಿ ಸಂಘಗಳ ಉಪನಿಬಂಧಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ರೀಡಾ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯೋಗ ವಿನಿಮಯ ಕೇಂದ್ರ, ಕಾರ್ಮಿಕ ಇಲಾಖೆ.

    ಕೌಂಟರ್ 7: ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ, ಸಣ್ಣ ನೀರಾವರಿ ಇಲಾಖೆ, ಕರ್ನಾಟಕ ನೀರು ಸರಬರಾಜು–ಒಳಚರಂಡಿ ಮಂಡಳಿ, ಕೆಆರ್‌ಡಿಸಿಎಲ್, ಕೆಆರ್‌ಐಡಿಎಲ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ.

    ಕೌಂಟರ್ 8: ಹೇಮಾವತಿ ನಾಲಾ ವಲಯ, ಎತ್ತಿನಹೊಳೆ ನಾಲಾ ವಲಯ, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ವಿಶೇಷ ಭೂಸ್ವಾಧೀನಾಧಿಕಾರಿಗಳು, ಎತ್ತಿನಹೊಳೆ/ಹೇಮಾವತಿ/ಕೆಐಎಡಿಬಿ/ರೈಲ್ವೆ ಯೋಜನೆ/ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ.

    ಕೌಂಟರ್ 9: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ವಕ್ಫ್ ಮಂಡಳಿ, ತೂಕ ಮತ್ತು ಅಳತೆ, ತುಮಕೂರು ವಿವಿ, ಜಿಲ್ಲಾ ಖಜಾನೆ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಸಣ್ಣ ಉಳಿತಾಯ, ಗ್ರಂಥಾಲಯ.

    ಕೌಂಟರ್ 10: ಕರ್ನಾಟಕ ಗೃಹ ಮಂಡಳಿ, ಅಗ್ನಿಶಾಮಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್ಸ್, ನಗರಾಭಿವೃದ್ಧಿ ಪ್ರಾಧಿಕಾರ, ರಾಜ್ಯ ಹಣಕಾಸು ಸಂಸ್ಥೆ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ (ಜಿಲ್ಲಾ ಪಂಚಾಯತ್).


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ತುಮಕೂರು: ನಗರದ ದಿಬ್ಬೂರು ಸರ್ಕಲ್ ನಿಂದ ಶಿರಾ ಗೇಟ್ ಕಡೆಗೆ 80 ಅಡಿ ರಸ್ತೆಯಲ್ಲಿ ವೀಲಿಂಗ್ ಮಾಡಿಕೊಂಡು ಬರುತ್ತಿದ್ದ ಯುವಕನನ್ನು…

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.