ತುಮಕೂರು: ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಮಾತುಗಳನ್ನಾಡಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಎಂ) ಒತ್ತಾಯಿಸಿದೆ.
ಸೂಲಿಬೆಲೆ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ಅತ್ಯಂತ ಆಕ್ಷೇಪಾರ್ಹವಾಗಿ ಮಾತನಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಈ ಮೂಲಕ ಅವರು ಸಮಾಜದಲ್ಲಿ ಧರ್ಮ ದ್ವೇಷ ಬಿತ್ತಲು ಮತ್ತು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಸಿಪಿಎಂ ಮುಖಂಡರು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಇಂತಹ ವ್ಯಕ್ತಿಗಳ ವಿರುದ್ಧ ತಕ್ಷಣವೇ ಕ್ರಮ ಜರುಗಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್. ಕೆ. ಸುಬ್ರಮಣ್ಯ ಹಾಗೂ ನಗರ ಕಾರ್ಯದರ್ಶಿ ಎ. ಲೋಕೇಶ್ ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


