ತುಮಕೂರು: ಒಳ ಮೀಸಲಾತಿ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರು ನೀಡಿರುವ ಇತ್ತೀಚಿನ ಹೇಳಿಕೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೈ.ಎಚ್. ಹುಚ್ಚಯ್ಯ ತೀವ್ರವಾಗಿ ಖಂಡಿಸಿದ್ದಾರೆ. ದಾವಣಗೆರೆ ವಿಧಾನಸಭಾ ಉಪಚುನಾವಣೆ ಸಂದರ್ಭದಲ್ಲಿ ನಡೆದ ಛಲವಾದಿ ಮಹಾಸಭಾ ಸಮಾವೇಶದಲ್ಲಿ ಪರಮೇಶ್ವರ ಅವರು ನೀಡಿದ್ದ ಹೇಳಿಕೆ ‘ದುರದೃಷ್ಟಕರ’ ಎಂದು ಅವರು ಬಣ್ಣಿಸಿದ್ದಾರೆ.
101 ಪರಿಶಿಷ್ಟ ಜಾತಿಗಳಿಗೆ ಇದ್ದ ಶೇ.24ರಷ್ಟು ಮೀಸಲಾತಿಯನ್ನು ಬಿಜೆಪಿ ಸರ್ಕಾರವು 6–6–5 ಅನುಪಾತದಲ್ಲಿ ಹಂಚಿಕೆ ಮಾಡಿ ಸಮುದಾಯವನ್ನು ಛಿದ್ರಗೊಳಿಸಿದೆ ಎಂದು ಪರಮೇಶ್ವರ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಹುಚ್ಚಯ್ಯ, ಸಚಿವರ ಈ ಮಾತುಗಳು ಅವರ ‘ಮನೋವಿಕಲತೆಗೆ’ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಪರಮೇಶ್ವರ ಅವರು, “ಪಕ್ಷ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಒಳ ಮೀಸಲಾತಿ ಜಾರಿ ಮಾಡಲಾಗುವುದು” ಎಂದು ಭರವಸೆ ನೀಡಿದ್ದರು. ಆದರೆ ಈಗ ಅಧಿಕಾರಕ್ಕೆ ಬಂದ ಮೇಲೆ ಅದನ್ನು ಮರೆತಿರುವುದು ಅವರ ಪ್ರಜ್ಞಾಹೀನ ಸ್ಥಿತಿಯನ್ನು ತೋರಿಸುತ್ತದೆ ಎಂದು ಹುಚ್ಚಯ್ಯ ಲೇವಡಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


