ತುಮಕೂರು: ಪಾವಗಡ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು 5ನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಏಪ್ರಿಲ್ 15 ರಿಂದ ಮೇ 4ರೊಳಗಾಗಿ ಜಾಲತಾಣ www.sw.kar.nic.in ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಕಡ್ಡಾಯವಾಗಿ ಆನ್ ಲೈನ್ ಅರ್ಜಿ ಹಾಗೂ ವಿದ್ಯಾರ್ಥಿಯ ಆಧಾರ್ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 5ನೇ ತರಗತಿ ಅಂಕಪಟ್ಟಿ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಹತಾ ಪರೀಕ್ಷೆಯನ್ನು ಮೇ 12ರಂದು ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ (ಬ್ಯಾಂಕ್ ರಸ್ತೆ, ಡಿಸಿಸಿ ಬ್ಯಾಂಕ್ ಎದುರು)ಯಲ್ಲಿ ನಡೆಸಲಾಗುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


