nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    By adminApril 15, 2026No Comments2 Mins Read
    ambedkar jayanti

    ತುಮಕೂರು: ಹಿಂದೂ ಧರ್ಮ ಬದಲಾವಣೆಯಾಗಬೇಕು. ಜಾತಿಯ ವ್ಯವಸ್ಥೆ ದೇಶದಲ್ಲಿ ಹೋಗಬೇಕು. ಎಲ್ಲಿಯವರೆಗೆ ದೇಶದಲ್ಲಿ ಜಾತಿ ವ್ಯವಸ್ಥೆ ಹೋಗುವುದಿಲ್ಲವೋ ಅಲ್ಲಿಯವರೆಗೂ ದೇಶದ ಜನರು ಒಂದೇ ಎಂಬ ಭಾವನೆ ಬರುವುದಿಲ್ಲ. ಇದರಿಂದ ದೇಶದ ಪ್ರಗತಿಯೂ ಸಾಧ್ಯವಿಲ್ಲ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತುಮಕೂರು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಹಾನಗರ ಪಾಲಿಕೆಯ ಅಂಬೇಡ್ಕರ್ ಪುತ್ಥಳಿ ಮುಂಭಾಗ ಮಂಗಳವಾರ ಆಯೋಜಿಸಿದ್ದ ಡಾ: ಬಿ.ಆರ್. ಅಂಬೇಡ್ಕರ್ ಅವರ 135ನೇ ಹಾಗೂ ಡಾ.ಬಾಬು ಜಗಜೀವನರಾಮ್ ಅವರ 119ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಕೊನೆ ದಿನಗಳಲ್ಲಿ ಅಸಮಾನತೆ ಇರುವ ಹಿಂದೂ ಧರ್ಮದಲ್ಲಿ ನಾನು ಸಾಯುವುದಿಲ್ಲ ಎಂದು ಹೇಳಿ ಸಮಾನತೆಯನ್ನು ಸಾರುವ ಬೌದ್ಧ ಧರ್ಮಕ್ಕೆ ಮತಾಂತರವಾದರು. ಈ ಸಂದರ್ಭದಲ್ಲಿ ಅನೇಕರು ಟೀಕೆ ಮಾಡಿದರು. ಆದರೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಾತಿ ತಾರತಮ್ಯ ಇರುವ ಧರ್ಮದಲ್ಲಿ ಇರಲು ಬಯಸಲಿಲ್ಲ. ಜಾತೀಯತೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ ಎಂದರು.

    ಭಾರತ ಅತಿದೊಡ್ಡ ಜನಸಂಖ್ಯೆ ಹೊಂದಿರುವ ದೇಶ ಮತ್ತು ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ದೇಶವಾಗಿದೆ. ಈ ದೇಶದಲ್ಲಿ ವರ್ಣಾಶ್ರಮ ಪದ್ಧತಿ ಹೇಗೆ ಬಂದಿದೆಯೋ ಗೊತ್ತಿಲ್ಲ. ಅದನ್ನೂ ಯಾರೂ ಸಮರ್ಥಿಸಿಕೊಳ್ಳುವುದಿಲ್ಲ. ಜಗತ್ತಿನ ಯಾವುದೇ ದೇಶದಲ್ಲಿ ಇಲ್ಲದ ಅಸಮಾನತೆಯ ಕಂಟಕ ನಮ್ಮ ದೇಶದಲ್ಲಿದ್ದು, 5000 ವರ್ಷಗಳ ಇತಿಹಾಸದಲ್ಲಿ ಅಸಮಾನತೆಯ ತಾರತಮ್ಯವನ್ನು ಜನರು ಅನುಭವಿಸಿದ್ದಾರೆ ಎಂದರು.

    ಮಹಿಳೆಯರಿಗೂ ಸಮಾನ ಹಕ್ಕು ಸಿಗಬೇಕೆಂಬ ಉದ್ದೇಶದಿಂದ ಅಂಬೇಡ್ಕರ್ ಅವರು ‘ಹಿಂದೂ ಕೋಡ್ ಬಿಲ್’ ಮಂಡಿಸಿದ್ದರು. ನಂತರ ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಸಿಗುವಂತೆ ಮಾಡಿದರು ಎಂದರು.

    ವಿವಿಧ ಕ್ಷೇತ್ರದ ಸಾಧಕರಾದ ಎನ್. ನಟರಾಜ್, ಟಿ.ಸಿ. ಸುರೇಶ್, ರಂಗಸ್ವಾಮಿ ಸೇರಿದಂತೆ ಹಲವರಿಗೆ ಜಿಲ್ಲಾಮಟ್ಟದ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

    ಡಾ. ಬಾಬು ಜಗಜೀವನರಾಮ್ ಅವರು ಹಸಿರು ಕ್ರಾಂತಿಯ ಮೂಲಕ ದೇಶದ ಆಹಾರ ಸಮಸ್ಯೆಯನ್ನು ನೀಗಿಸಿ ದೇಶವನ್ನು ಸ್ವಾವಲಂಬಿಯಾಗಿಸಿದರು ಎಂದು ಸಚಿವರು ಸ್ಮರಿಸಿದರು.

    ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.