ಬೆಂಗಳೂರು: ನಗರದ ರಾಜರಾಜೇಶ್ವರಿ ನಗರದಲ್ಲಿ (RR Nagar) ಮನಕಲಕುವ ಘಟನೆಯೊಂದು ನಡೆದಿದ್ದು, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಮಗನೇ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ.
ಆರ್ ಆರ್ ನಗರದ ಬೆಮಲ್ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. 72 ವರ್ಷದ ಸಾವಿತ್ರಮ್ಮ ಕೊಲೆಯಾದ ದುರ್ದೈವಿ. ಮಗ ವೆಂಕಟೇಶ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ.
ಮೃತ ಸಾವಿತ್ರಮ್ಮ ಅವರು ಕಳೆದ ಕೆಲವು ದಿನಗಳಿಂದ ಸ್ಟ್ರೋಕ್ (ಪಾರ್ಶ್ವವಾಯು) ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಸ್ಥಿತಿಯನ್ನು ನೋಡಿ ನೊಂದಿದ್ದ ಮಗ ವೆಂಕಟೇಶ್, ಅವಸ್ಥೆ ತಾಳಲಾರದೆ ಅಥವಾ ತಾಯಿಯ ಆರೈಕೆ ಮಾಡಲಾಗದೆ ಈ ಹಂತಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. ಮನೆಯ ಮೂರನೇ ಮಹಡಿಯಿಂದ ತಾಯಿಯನ್ನು ಕೆಳಕ್ಕೆ ತಳ್ಳಿ ಆತ ಕ್ರೂರವಾಗಿ ಕೊಲೆ ಮಾಡಿದ್ದಾನೆ.
ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಆರ್.ಆರ್.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಮಗ ವೆಂಕಟೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೆತ್ತ ತಾಯಿಯನ್ನು ಹೀಗೆ ಅಮಾನವೀಯವಾಗಿ ಕೊಂದ ಮಗನ ಕೃತ್ಯ ಕಂಡು ಸ್ಥಳೀಯರು ಆಘಾತ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


