nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ
    ತುಮಕೂರು April 17, 2026

    ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ

    By adminApril 17, 2026No Comments2 Mins Read
    shubhakalyan

    ತುಮಕೂರು: ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಯ 73 ಗ್ರಾಮ ಪಂಚಾಯಿತಿಗಳ 109 ಗ್ರಾಮಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ನಾಗರಿಕರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.

    ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿ ಕೆಲವು ಗ್ರಾಮಗಳಿಗೆ ಖಾಸಗಿ ಟ್ಯಾಂಕರ್‍ಗಳು, ಬೋರ್‍ವೆಲ್‍ಗಳು ಹಾಗೂ ಪರ್ಯಾಯ ವ್ಯವಸ್ಥೆಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜೂನ್ 2026ರವರೆಗೆ ಎದುರಾಗಬಹುದಾದ ಸಮಸ್ಯೆಯನ್ನು ಮನಗಂಡು, 141 ಗ್ರಾಮ ಪಂಚಾಯಿತಿಗಳ 194 ಗ್ರಾಮಗಳಿಗೆ 578.90 ಲಕ್ಷ ರೂ. ವೆಚ್ಚದಲ್ಲಿ ತುರ್ತು ಕಾರ್ಯಯೋಜನೆ ರೂಪಿಸಲಾಗಿದೆ.


    Provided by
    Provided by

    ನಗರ ಪ್ರದೇಶಗಳಲ್ಲಿ ಬುಗುಡನಹಳ್ಳಿ ಕೆರೆಯಲ್ಲಿ ಸಂಗ್ರಹಿತ ನೀರು ಒಂದು ತಿಂಗಳಿಗೆ ಸಾಕಾಗಲಿದ್ದು, ಹೆಚ್ಚುವರಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

    ಆಲಿಕಲ್ಲು ಮಳೆ: 840 ರೈತರ ಬೆಳೆ ಹಾನಿ

    ಮಳೆ ಹಾಗೂ ಆಲಿಕಲ್ಲು ಮಳೆಯಿಂದ ಶಿರಾ, ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕುಗಳಲ್ಲಿ ಕೆಲವು ಕಡೆ ಬೆಳೆ ಹಾನಿ ಸಂಭವಿಸಿದೆ ಎಂದು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ಶಿರಾ ತಾಲೂಕಿನ ತಡಕಲೂರು ಗ್ರಾಮದಲ್ಲಿ ಇಬ್ಬರು ರೈತರ 2.00 ಹೆಕ್ಟೇರ್ ಜೋಳದ ಬೆಳೆ ಹಾನಿಗೊಳಗಾಗಿದೆ. ತೋಟಗಾರಿಕೆ ಬೆಳೆಗಳಲ್ಲಿ ಹುಲಿಕುಂಟೆ ಹೋಬಳಿಯ ತಡಕಲೂರು ಮತ್ತು ಹಂದಿಕುಂಟೆ ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 840 ರೈತರ 538.27 ಹೆಕ್ಟೇರ್ ಪ್ರದೇಶದಲ್ಲಿ ಹಾನಿ ವರದಿಯಾಗಿದೆ. ಇದರಲ್ಲಿ ದಾಳಿಂಬೆ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ರೇಷ್ಮೆ ಬೆಳೆಗಳಲ್ಲಿ 23 ರೈತರ 18.51 ಹೆಕ್ಟೇರ್ ಪ್ರದೇಶದಲ್ಲಿ ಹಾನಿ ಸಂಭವಿಸಿದ್ದು, ಎಲ್ಲಾ ವಿವರಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದೆ ಎಂದರು.

    ರಾಗಿ ಖರೀದಿ:

    ರಾಗಿ ಖರೀದಿ ಕುರಿತು, 2025-26ನೇ ಸಾಲಿನಲ್ಲಿ 11 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿ ಕ್ವಿಂಟಾಲ್‍ಗೆ 4,886 ರೂ. ಬೆಲೆ ನಿಗದಿಯಾಗಿದೆ. ಇದುವರೆಗೆ 33,043 ರೈತರಿಂದ 7,85,889 ಕ್ವಿಂಟಾಲ್ ರಾಗಿ ಖರೀದಿ ಮಾಡಲಾಗಿದ್ದು, ಉಳಿದ ರೈತರಿಂದ ಖರೀದಿ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

    • ನೀರಿನ ಗುಣಮಟ್ಟ: ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆಗಾಗಿ ವ್ಯಾಪಕ ಪರೀಕ್ಷೆಗಳನ್ನು ನಡೆಸಲಾಗಿದೆ. ಸಾವಿರಾರು ಮಾದರಿಗಳಲ್ಲಿ ಕಲುಷಿತ ಅಂಶಗಳು ಪತ್ತೆಯಾಗಿದ್ದು, ಬಹುತೇಕ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
    • ಪಶುಪಾಲನೆ: ಜಿಲ್ಲೆಯಲ್ಲಿ ಪ್ರಸ್ತುತ 36 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ ಎಂದು ಪಶುಪಾಲನಾ ಇಲಾಖೆಯವರು ಮಾಹಿತಿ ನೀಡಿದ್ದಾರೆ.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜಾ, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.