nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    • ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    ತುಮಕೂರು April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    By adminApril 19, 2026No Comments2 Mins Read
    yettinahole

    ತುಮಕೂರು: ಬರಪೀಡಿತ ಬಯಲು ಸೀಮೆಯ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇನ್ನಿತರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ಅಂತರ್ಜಲ ವೃದ್ಧಿಗಾಗಿ ರೂಪಿಸಿರುವ ಎತ್ತಿನಹೊಳೆ ಯೋಜನೆಗೆ ಅಡ್ಡಿಯಾಗಿದ್ದ ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಏ.1.2026ರಂದು ಸಿಕ್ಕಿದ್ದು, ಬಾಕಿ ಇರುವ 6 ಕಿ.ಮೀ. ಟನಲ್ ಕಾಮಗಾರಿ ಮುಗಿಸಿ, 2026ರ ಅಕ್ಟೋಬರ್ ಒಳಗೆ ತುಮಕೂರು ಜಿಲ್ಲೆಗೆ ನೀರು ಹರಿಸಲು ಪ್ರಯತ್ನ ನಡೆಸುತ್ತಿರುವುದಾಗಿ ವಿಶ್ವೇಶ್ವರಯ್ಯ ಜಲ ಅಭಿವೃದ್ಧಿ ನಿಗಮದ ಅಧಿಕಾರಿ ಚೀಫ್ ಇಂಜಿನಿಯರ್ ಆನಂದ್ ಹೆಚ್.ಎಸ್. ತಿಳಿಸಿದ್ದಾರೆ.

    ನಗರದ ವಿಶ್ವೇಶ್ವರಯ್ಯ ಜಲ ಅಭಿವೃದ್ಧಿ ನಿಗಮದ ಎತ್ತಿನಹೊಳೆ ಯೋಜನಾ ಕಚೇರಿಯಲ್ಲಿ ಹಾಲಪ್ಪ ಪ್ರತಿಷ್ಠಾನದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪರಿಸರ ಕ್ಲಿಯರೆನ್ಸ್ ಪಡೆಯಲು ಸಹಕರಿಸಿದ ಅಧಿಕಾರಿಗಳಿಗೆ ಅಭಿನಂದನೆ ಹಾಗೂ ಯೋಜನೆಗೆ ಸಂಬಂಧಿಸಿದ ಮಾಹಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 262 ಕಿ.ಮೀ. ನಾಲಾ ಕಾಮಗಾರಿಯಲ್ಲಿ 221 ಕಿ.ಮೀ. ಮುಕ್ತಾಯಗೊಂಡಿದೆ. 20 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಹತ್ತು ಕಿ.ಮೀ. ಅರಣ್ಯ ಕಾಮಗಾರಿಯಲ್ಲಿ 6 ಕಿ.ಮೀ. ಬಾಕಿ ಇದ್ದು, ಈ ಕಾಮಗಾರಿ ಮುಗಿದರೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದರು.


    Provided by
    Provided by

    ಮೊದಲು ಕಾಮಗಾರಿ ಆರಂಭದಲ್ಲಿ ಈಗಾಗಲೇ ನಾವು ಕೆಲಸ ಮಾಡಿರುವ ಭೂಮಿ ಅರಣ್ಯ ಇಲಾಖೆಗೆ ಸೇರಿದೆಯೋ ಅಥವಾ ಕಂದಾಯ ಇಲಾಖೆಯದ್ದೋ ಎಂಬ ಗೊಂದಲ ಎರಡು ಇಲಾಖೆಗಳಲ್ಲಿ ಇತ್ತು. ಆದರೆ ನಾವೇ ಖುದ್ದಾಗಿ ಪರಿಶೀಲಿಸಿದಾಗ ವಾಸ್ತವ ತಿಳಿದಿದೆ. ಹಾಗಾಗಿ ಈಗಾಗಲೇ ಬಳಕೆ ಮಾಡಿದ ಅರಣ್ಯ ಭೂಮಿಗೆ ಹೆಚ್ಚುವರಿ ಮೊತ್ತವಾಗಿ 425 ಕೋಟಿ ಭರಿಸಬೇಕಾಗಿದೆ. ಇದಕ್ಕೆ ಈಗಾಗಲೇ ರಾಜ್ಯ ಸರ್ಕಾರ ಮತ್ತು ಜಲಸಂಪನ್ಮೂಲ ಇಲಾಖೆ ಅನುಮತಿ ನೀಡಿದೆ. ಅರಣ್ಯ ಭೂಮಿಗೆ ಬದಲಾಗಿ ಪರ್ಯಾಯ ಭೂಮಿ ನೀಡಲು ಸೂಚಿಸಿದ್ದು, ಇದಕ್ಕೂ ಕೂಡ ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ. ಅರಣ್ಯ ಭೂಮಿಯಲ್ಲಿ ಟನಲ್ ಮೂಲಕ ನೀರು ಹರಿಸಲು ಅನುಮೋದನೆ ದೊರೆತಿದ್ದು, ರಾಜ್ಯ ಸರ್ಕಾರದ ಡಿಮ್ಯಾಂಡ್ ನೋಟಿಸ್‌ಗೆ ಈ ಏಪ್ರಿಲ್ ಅಂತ್ಯದೊಳಗೆ ಒಪ್ಪಿಗೆ ದೊರೆತರೆ ಸಮರೋಪಾದಿಯಲ್ಲಿ ಕಾಮಗಾರಿ ನಡೆಸಿ, 2026ರ ಅಕ್ಟೋಬರ್ ತುಮಕೂರು ಜಿಲ್ಲೆಗೆ, ಹಾಗೂ 2027 ಅಕ್ಟೋಬರ್ ವೇಳೆಗೆ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದರು.

    ಎತ್ತಿನಹೊಳೆ ಯೋಜನೆಯಿಂದ 15,029 ಟಿ.ಎಂ.ಸಿ ಕುಡಿಯುವ ನೀರಿಗೆ ಮತ್ತು 8967 ಟಿ.ಎಂ.ಸಿ ನೀರನ್ನು ಅಂತರ್ಜಲ ವೃದ್ಧಿಗೆ ಕೆರೆ ತುಂಬಿಸಲು ನಿಗದಿಪಡಿಸಲಾಗಿದೆ.

    ನನೆಗುದಿಗೆ ಬಿದ್ದಿದ್ದ ಎತ್ತಿನಹೊಳೆ ಯೋಜನೆ ಚುರುಕುಗೊಳ್ಳಲು ಜಿಲ್ಲೆಯ ಎಲ್ಲಾ ತಾಲೂಕುಗಳ ರೈತರು, ತಾಯಂದಿರ ಹೋರಾಟದ ಜೊತೆಗೆ, ಅಧಿಕಾರಿಗಳ ಶ್ರಮವೂ ಇದೆ. ಕೇಂದ್ರ ಸರ್ಕಾರದ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರ ನೀಡಿ, ಪರ್ಯಾಯ ಜಾಗದ ಜೊತೆಗೆ, ನೈಜ ಚಿತ್ರಣ ನೀಡಿ, ಯೋಜನೆಗೆ ಇದ್ದ ಅಡ್ಡಿ, ಆತಂಕ ನಿವಾರಿಸುವಲ್ಲಿ ಶ್ರಮ ವಹಿಸಿದ್ದಾರೆ.

    — ಮುರುಳೀಧರ ಹಾಲಪ್ಪ

    ಮಾಜಿ ಶಾಸಕ ಎಸ್.ಷಫಿ ಅಹಮದ್ ಮಾತನಾಡಿ, 12 ವರ್ಷಗಳ ಹಿಂದೆ ಆರಂಭವಾದ ಯೋಜನೆ ಇನ್ನೂ ಪೂರ್ಣಗೊಳ್ಳದಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ ನಮ್ಮ ಭಾಗಕ್ಕೆ ಈ ಯೋಜನೆಯಿಂದ ಏನು ಪ್ರಯೋಜನ ಎಂಬ ಕುತೂಹಲ ಜನಗಳಲ್ಲಿದೆ. ಹಾಗಾಗಿ ಜನರಿಗೆ ಸಮರ್ಪಕ ಮಾಹಿತಿಯ ಜೊತೆಗೆ, ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೋರಿದರು.

    ಮಾಜಿ ಶಾಸಕ ಗಂಗಹನುಮಯ್ಯ ಮಾತನಾಡಿ, ಎತ್ತಿನಹೊಳೆ ಯೋಜನೆ ಮಳೆಗಾಲದಲ್ಲಿ ಹರಿದು ಸಮುದ್ರ ಪಾಲಾಗುವ ನೀರನ್ನು ಬರಪೀಡಿತ ಪ್ರದೇಶಗಳಿಗೆ ಹರಿಸುವ ಯೋಜನೆಯಾಗಿದೆ. ಹಾಗಾಗಿ 25 ಟಿ.ಎಂ.ಸಿ ನೀರು ಸಂಗ್ರಹಿಸಲು ಅಗತ್ಯವಿರುವ ಬಫರ್ ಡ್ಯಾಂ ನಿರ್ಮಾಣಕ್ಕೆ ಒತ್ತು ನೀಡುವಂತೆ ಸಲಹೆ ನೀಡಿದರು.

    ಸಭೆಯಲ್ಲಿ ಎತ್ತಿನಹೊಳೆ ಯೋಜನೆಯ ಉಪ ಮುಖ್ಯ ಇಂಜಿನಿಯರ್ ಪರಮೇಶ್ವರಪ್ಪ, ಕಾರ್ಯಪಾಲಕ ಅಭಿಯಂತರ ಮುರುಳೀಧರ್, ಮುಖಂಡರಾದ ಎ.ಗೋವಿಂದರಾಜು, ಚಿಕ್ಕನಾಯಕನಹಳ್ಳಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಪ್ರಸನ್ನ ಕುಮಾರ್, ನಂಜುಂಡಪ್ಪ, ಲೋಕೇಶ್, ಗಿರೀಶ್, ಕೆಂಚಮಾರಯ್ಯ, ನಯಾಜ್, ರೈತ ಸಂಘದ ರಾಜಪ್ಪ ಹಾಗೂ ನೂರಾರು ರೈತರು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    April 18, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು…

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.