ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಮಸ್ತ ವೀರಶೈವ-ಲಿಂಗಾಯಿತ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 20ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಅಮಾನಿಕೆರೆ ರಸ್ತೆಯಲ್ಲಿರುವ ಕನ್ನಡಭವನದಲ್ಲಿ ‘ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಆಗಮಿಸುವರು.
ಕಾರ್ಯಕ್ರಮದಲ್ಲಿ ಶರಣೆ ಧ್ಯಾನಶಿವಬಸಪ್ಪ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಮುದಾಯದ ಮುಖಂಡರು, ಕಲಾವಿದರು, ಜಿಲ್ಲೆಯ ವೀರಶೈವ ಲಿಂಗಾಯಿತ ಸಮುದಾಯದ ಸಂಘ ಸಂಸ್ಥೆಗಳ ಅಧ್ಯಕ್ಷರು, ಮುಖಂಡರು ಹಾಗೂ ಗಣ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


