ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಹಿ ಸುದ್ದಿ ನೀಡಿದೆ. ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 890 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ:
- ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
- ಉಳಿಕೆ ಮೂಲ ವೃಂದ (RPC): 632 ಹುದ್ದೆಗಳು (81 ಕೃಷಿ ಅಧಿಕಾರಿ ಮತ್ತು 551 ಸಹಾಯಕ ಕೃಷಿ ಅಧಿಕಾರಿ).
- ಕಲ್ಯಾಣ ಕರ್ನಾಟಕ ವೃಂದ (HK): 258 ಹುದ್ದೆಗಳು (40 ಕೃಷಿ ಅಧಿಕಾರಿ ಮತ್ತು 218 ಸಹಾಯಕ ಕೃಷಿ ಅಧಿಕಾರಿ).
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಮೇ 2026.
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12 ಮೇ 2026.
- ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ: 06 ಜೂನ್ 2026.
- RPC ವೃಂದದ ಲಿಖಿತ ಪರೀಕ್ಷೆ: 07 ಜೂನ್ 2026.
- ಕಲ್ಯಾಣ ಕರ್ನಾಟಕ ವೃಂದದ ಪರೀಕ್ಷೆ: 14 ಜೂನ್ 2026.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಈ ಮಾಹಿತಿಯನ್ನು ನೀಡಿದ್ದು, ಅರ್ಹ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಕೆಇಎ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಲು ಸೂಚಿಸಿದ್ದಾರೆ. ಆಸಕ್ತರು ನಿಗದಿತ ಅವಧಿಯೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


