ವಿಜಯಪುರ: ರಾಜ್ಯ ರಾಜಕಾರಣದಲ್ಲಿ ಸದಾ ತಮ್ಮ ನೇರ ನುಡಿ ಹಾಗೂ ಭಿನ್ನ ನಿಲುವಿನಿಂದಲೇ ಗುರುತಿಸಿಕೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಹೊಸ ರಾಜಕೀಯ ಬಾಷ್ಯ ಬರೆಯಲು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಅಂದರೆ ಮೇ ತಿಂಗಳಲ್ಲಿ “ಒಳ್ಳೆಯ ಮುಹೂರ್ತ” ನೋಡಿ ತಮ್ಮ ಹೊಸ ರಾಜಕೀಯ ಪಯಣವನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ.
ಮೇ ತಿಂಗಳಿನಿಂದ ಯತ್ನಾಳ್ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದು, ಮೊದಲು ಜಿಲ್ಲಾ ಕೇಂದ್ರಗಳು ಮತ್ತು ನಂತರ ತಾಲ್ಲೂಕು ಕೇಂದ್ರಗಳಲ್ಲಿ ಸಭೆ ನಡೆಸಲಿದ್ದಾರೆ.
ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ತಮ್ಮ ಜಿಲ್ಲಾವಾರು ಸಭೆಗಳನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ. ಹಿಂದುತ್ವ, ನಿರುದ್ಯೋಗ ನಿವಾರಣೆ ಮತ್ತು ಅಭಿವೃದ್ಧಿ — ಈ ಮೂರು ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಜನರನ್ನು ತಲುಪಲಿದ್ದಾರೆ.
ಈ ಪ್ರವಾಸದ ವೇಳೆ ಹೊಸ ಪ್ರಾದೇಶಿಕ ಪಕ್ಷವನ್ನು ಕಟ್ಟುವ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು. “ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಈಗಾಗಲೇ ಶುರುವಾಗಿದೆ, ಜನರ ಬೆಂಬಲ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಅವರು ತಿಳಿಸಿದ್ದಾರೆ.
ಹಿಂದೂಪರ ಚಿಂತನೆಯುಳ್ಳವರು ಹಾಗೂ ನಿರುದ್ಯೋಗಿ ಯುವಕರನ್ನು ಒಗ್ಗೂಡಿಸಿ ಹೋರಾಟ ರೂಪಿಸುವುದು ಇವರ ಪ್ರಮುಖ ಉದ್ದೇಶವಾಗಿದೆ.
ಚುನಾವಣಾ ಆಯೋಗವು ತಮ್ಮ ಹೊಸ ಸಂಘಟನೆ ಅಥವಾ ಪಕ್ಷಕ್ಕೆ ಯಾವ ಚಿಹ್ನೆ ನೀಡಬಹುದು ಎಂಬ ಕುತೂಹಲವನ್ನೂ ಯತ್ನಾಳ್ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


