nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    ತುಮಕೂರು April 22, 2026

    ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ

    By adminApril 22, 2026No Comments2 Mins Read

    ತುಮಕೂರು: ನಗರದ ಕ್ಯಾತ್ಸಂದ್ರ ಸಮೀಪದ ಡಾ.ಪುನೀತ್ ರಾಜ್‌ ಕುಮಾರ್ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದು, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (TUDA) ಮತ್ತು ಮಹಾನಗರ ಪಾಲಿಕೆಯ ವಿಳಂಬ ನೀತಿಯ ವಿರುದ್ಧ ನಾಗರಿಕ ಹಿತರಕ್ಷಣಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

    ಮಂಗಳವಾರ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಡಾವಣೆಯ ನಾಗರಿಕರು, ತಮ್ಮ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸದಿದ್ದರೆ ಸಾಮೂಹಿಕ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


    Provided by
    Provided by

    ಬಡಾವಣೆಯ ಚರಂಡಿ ವ್ಯವಸ್ಥೆಯು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಒಳಚರಂಡಿ ನೀರು ರಸ್ತೆಗಳ ಮೇಲೆ ಹರಿಯುತ್ತಿದೆ.  ಬಡಾವಣೆಗೆ ಇನ್ನೂ ಅಧಿಕೃತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿಲ್ಲ. ಇದರ ಜೊತೆಗೆ  ರಸ್ತೆ ಮೇಲೆ ಹರಿಯುವ ಕೊಳಚೆ ನೀರಿನಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳು ಮತ್ತು ವೃದ್ಧರ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

    ಈ ಸಂದರ್ಭದಲ್ಲಿ ಮಾತನಾಡಿದ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಪ್ರತಾಪ್ ಮುದಕರಿ, “ಪ್ರಾಧಿಕಾರವು ಕಾಮಗಾರಿಗಳನ್ನು ಪೂರ್ಣಗೊಳಿಸದೆಯೇ ಬಡಾವಣೆಯನ್ನು ಪಾಲಿಕೆಗೆ ಹಸ್ತಾಂತರಿಸಲು ಮುಂದಾಗಿದೆ. ಇತ್ತ ಪಾಲಿಕೆಯು ‘ಸೌಕರ್ಯ ಕಲ್ಪಿಸುವುದು ನಮ್ಮ ಜವಾಬ್ದಾರಿಯಲ್ಲ’ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದೆ,” ಎಂದು ದೂರಿದರು.

    “ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 1976ರ ಸೆಕ್ಷನ್ 65 ಮತ್ತು 67ರ ಅನ್ವಯ, ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯದ ಜವಾಬ್ದಾರಿ ಪಾಲಿಕೆಯದ್ದೇ ಆಗಿರುತ್ತದೆ. ಪ್ರಾಧಿಕಾರ ಮತ್ತು ಪಾಲಿಕೆಯ ನಡುವಿನ ಸಮನ್ವಯದ ಕೊರತೆಗೆ ಸಾರ್ವಜನಿಕರು ಬಲಿಯಾಗಬಾರದು,” ಎಂದು ಅವರು ಒತ್ತಾಯಿಸಿದರು.

    ತಕ್ಷಣವೇ ಅವೈಜ್ಞಾನಿಕ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಬೇಕು.  ಒಳಚರಂಡಿ ನೀರು ರಸ್ತೆ ಮೇಲೆ ಬರದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಈ ಎಲ್ಲಾ ಕಾಮಗಾರಿಗಳಿಗೆ ಸ್ಪಷ್ಟವಾದ ಕಾಲಮಿತಿಯನ್ನು ನಿಗದಿಪಡಿಸಬೇಕು ಎಂದು ಇದೇ ವೇಳೆ ನಾಗರಿಕರು ಒತ್ತಾಯಿಸಿದರಲ್ಲದೇ,  ಒಂದು ವೇಳೆ ಪಾಲಿಕೆಯು ಈ ಮನವಿಗೆ ತಕ್ಷಣ ಸ್ಪಂದಿಸದಿದ್ದಲ್ಲಿ, ಬಡಾವಣೆಯ ಎಲ್ಲಾ ನಿವಾಸಿಗಳು ಸೇರಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.