nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    April 22, 2026

    ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ

    April 22, 2026

    ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ

    April 22, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ
    • ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    • ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ
    • ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ
    ತುಮಕೂರು April 22, 2026

    ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ

    By adminApril 22, 2026No Comments2 Mins Read
    tipaturu

    ತಿಪಟೂರು: ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ನಗರಸಭೆ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದರು.

    ಬೇಸಿಗೆ ಕಾಲ ಆರಂಭವಾಗುತ್ತಿರುವುದರಿಂದ ನಗರವಾಸಿಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.  ವಾರ್ಡ್‌ಗಳ ಬೇಡಿಕೆಗೆ ಅನುಗುಣವಾಗಿ ನೀರು ಒದಗಿಸಬೇಕು ಹಾಗೂ ಅವಶ್ಯಕತೆ ಇರುವ ಕಡೆಗಳಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಸಬೇಕು ಎಂದು ಸೂಚಿಸಿದರು.


    Provided by
    Provided by

    ನಗರದಲ್ಲಿ ನಿರ್ಮಾಣವಾಗುತ್ತಿರುವ ವಾಣಿಜ್ಯ ಮತ್ತು ವಸತಿ ಸಂಕೀರ್ಣಗಳ ಮಾಹಿತಿ ಪಡೆದು, ಅವುಗಳ ನಿಯಮಬದ್ಧ ಪರಿಶೀಲನೆ ನಡೆಸಲು ಆದೇಶಿಸಿದರು. ರಜತಾದ್ರಿಪುರ ಮತ್ತು ಕೊನೇಹಳ್ಳಿಯಲ್ಲಿ ಬೆಸ್ಕಾಂ ಕಚೇರಿ, ಎಪಿಎಂಸಿ ಆವರಣದಲ್ಲಿ ಕೋಲ್ಡ್ ಸ್ಟೋರೇಜ್ ಹಾಗೂ ಅಮಾನಿಕೆರೆಯಲ್ಲಿ ಗಾಜಿನ ಮನೆ ನಿರ್ಮಾಣದ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿಗಳು ಮಂಜೂರು ಮಾಡಿರುವ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ತಾಕೀತು ಮಾಡಿದರು.

    ಇನ್ನೂ, ಮಾಟನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಎರಡು ಮನೆಗಳು ಸುಟ್ಟು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ತಹಸೀಲ್ದಾರ್ ಮತ್ತು ಅಗ್ನಿಶಾಮಕ ದಳದಿಂದ ವರದಿ ಬಂದ ತಕ್ಷಣವೇ ಸಂಬಂಧಪಟ್ಟ ಗ್ಯಾಸ್ ಏಜೆನ್ಸಿ ವತಿಯಿಂದ ಪರಿಹಾರ ಕೊಡಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

    ನಗರದ ಕಲ್ಪತರು ಆಡಿಟೋರಿಯಂನಲ್ಲಿ ನಡೆದ ಕಂದಾಯ ಇಲಾಖೆಯ ಸಭೆಯಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸೂಚಿಸಲಾಯಿತು. ಇ–ಸ್ವತ್ತು ಸಂಬಂಧಿತ ಕೆಲಸಗಳನ್ನು ಸರ್ಕಾರದ ಗುರಿಯಂತೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

    ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಶನಿವಾರದೊಳಗೆ ತಮಗೆ ನೀಡಲಾದ ಗುರಿಯನ್ನು ಕಡ್ಡಾಯವಾಗಿ ತಲುಪಬೇಕು. ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬ ಧೋರಣೆ ತೋರುವ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದರು.

    ಜಿಲ್ಲಾಧಿಕಾರಿಗಳ ಭೇಟಿಯ ಮಾಹಿತಿಯನ್ನು ಪತ್ರಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಮುಂಚಿತವಾಗಿ ನೀಡದ ಇಲಾಖೆಯ ಕ್ರಮಕ್ಕೆ ಸ್ಥಳೀಯವಾಗಿ ತೀವ್ರ ಆಕ್ರೋಶ ವ್ಯಕ್ತವಾಯಿತು.

    ಸಭೆಯಲ್ಲಿ ಶಾಸಕ ಕೆ.ಷಡಕ್ಷರಿ, ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ, ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ತಹಸೀಲ್ದಾರ್ ಮೋಹನ್ ಕುಮಾರ್, ಇಒ ಸುದರ್ಶನ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚನ್ನಕೇಶವ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    April 22, 2026

    ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ

    April 22, 2026

    ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ

    April 22, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    April 22, 2026

    ತುಮಕೂರು: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ‘ನಾರಿಶಕ್ತಿ ವಂದನ್’ ಮಸೂದೆಯನ್ನು ವಿರೋಧಿಸುವ ಮೂಲಕ…

    ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ

    April 22, 2026

    ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ

    April 22, 2026

    ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.