ತುಮಕೂರು: “ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡ ಮತ್ತು ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು ಎಂಬುದು ನಮ್ಮ ಸಂಘಟನೆಯ ಮೂಲ ಆಶಯ,” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ ಅವರು ತಿಳಿಸಿದರು.
ನಗರದಲ್ಲಿ ಬುಧವಾರ ನಡೆದ ಕರವೇ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷರಾದ ನಾರಾಯಣಗೌಡರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದರು.
ಜಿಲ್ಲೆಯ ಕೈಗಾರಿಕಾ ವಲಯದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದ ಅವರು, “ಜಿಲ್ಲೆಯ ಕಾರ್ಖಾನೆಗಳಲ್ಲಿ ಪರರಾಜ್ಯದವರೇ ತುಂಬಿ ಹೋಗಿದ್ದಾರೆ. ಅರ್ಹ ಕನ್ನಡಿಗರು ಕೆಲಸವಿಲ್ಲದೆ ಮೂಲೆಗುಂಪಾಗುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಕನ್ನಡಿಗರಿಗೆ ಮೊದಲ ಆದ್ಯತೆಯ ಮೇರೆಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು,” ಎಂದು ಎಚ್ಚರಿಸಿದರು.
ನೂತನ ಪದಾಧಿಕಾರಿಗಳ ಪಟ್ಟಿ
ಜಿಲ್ಲಾ ಉಪಾಧ್ಯಕ್ಷರು: ಎಂ.ಡಿ. ಮನ್ಸೂರ್ ಅಲಿ, ಅರುಣ್‌ಗೌಡ.
ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು: ಸಂಜು, ಹೆಚ್.ಎನ್. ಅರುಣ್ ಕುಮಾರ್, ಮಿಸ್ಟಾ ಬಾರಿ.
ಜಿಲ್ಲಾ ಯುವ ಘಟಕದ ಅಧ್ಯಕ್ಷರು: ಪವನ್ ಪಿ. ಗೊಲ್ಲರಹಟ್ಟಿ.
ತಾಲ್ಲೂಕು ಅಧ್ಯಕ್ಷರು: ಅಫ್ಜಲ್ (ತುಮಕೂರು ತಾಲ್ಲೂಕು ಯುವ ಘಟಕ), ಗುರುಶಾಂತ್ (ಚಿಕ್ಕನಾಯಕನಹಳ್ಳಿ ನಗರಾಧ್ಯಕ್ಷ).
ಸಭೆಯಲ್ಲಿ ಜಿಲ್ಲಾ ಗೌರವಾಧ್ಯಕ್ಷ ಪಿ.ಆರ್. ರಂಗಸ್ವಾಮಿ ಪೆಮ್ಮನಹಳ್ಳಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ ಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಅಂಬರೀಷ್ ಹಾಗೂ ಎಲ್ಲಾ ತಾಲ್ಲೂಕು ಅಧ್ಯಕ್ಷರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


