ತುಮಕೂರು: ತುಮಕೂರು ನಗರದ ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್ ಅವರ ತಾಯಿ ಫಾತಿಮಾ ಬೇಗಂ ಅವರು ಇಂದು ದೈವಾಧೀನರಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.
ಇಂದು ತುಮಕೂರಿಗೆ ಭೇಟಿ ನೀಡಿದ ಸಚಿವರು, ಮೃತರ ಪಾರ್ಥಿವ ಶರೀರದ ದರ್ಶನ ಪಡೆದು ಪುಷ್ಪಗುಚ್ಛ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಮಾಜಿ ಶಾಸಕ ರಫೀಕ್ ಅಹಮದ್ ಹಾಗೂ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವರು, “ಫಾತಿಮಾ ಬೇಗಂ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಲಾರದ ದುಃಖವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


