ಕಡೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕರೊಬ್ಬರ (PSI) ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ.
ಕಡೂರು ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿರುವ ಶರಣಬಸಪ್ಪ ಅವರ ಪತ್ನಿ ಕಾವ್ಯ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಾವ್ಯ ಅವರು ಕಡೂರು ಪಟ್ಟಣದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ದಂಪತಿಗಳ ನಡುವೆ ಕಳೆದ ಕೆಲವು ದಿನಗಳಿಂದ ಕೌಟುಂಬಿಕ ವಿಚಾರವಾಗಿ ಮನಸ್ತಾಪವಿತ್ತು ಎನ್ನಲಾಗಿದೆ. ಇದೇ ಕಲಹ ತಾರಕಕ್ಕೇರಿ ಮನನೊಂದ ಕಾವ್ಯ ಈ ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


