ತುರುವೇಕೆರೆ: ಗ್ರಾಮ ಪಂಚಾಯತಿ ಕರ ವಸೂಲಿಗಾರರ ಹುದ್ದೆಯನ್ನು ಸ್ಥಳೀಯರಿಗೆ ನೀಡಬೇಕು ಎಂದು ರೈತ ಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್ ಒತ್ತಾಯ ಮಾಡಿದ್ದಾರೆ.
ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ತಾಲ್ಲೂಕು ಪಂಚಾಯಿತಿ ಲೆಕ್ಕಾಧಿಕಾರಿ ಸವಿತಾರವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಮಾಯಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಕರ ವಸೂಲಿಗಾರ ಹುದ್ದೆಯನ್ನು ಈ ಹಿಂದೆ ತಾತ್ಕಾಲಿಕವಾಗಿ ನೀಡಲಾಗಿತ್ತು ಆದರೆ ಆ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ತಮ್ಮ ಚಂದನ್ ಗೌಡ ಅನುಕಂಪದ ಆಧಾರದಲ್ಲಿ ಕರ ವಸೂಲಿಗಾರ ಹುದ್ದೆ ನೀಡುವಂತೆ ಮನವಿ ಸಲ್ಲಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹುದ್ದೆ ಪಡೆಯಲು ಮುಂದಾಗಿದ್ದಾರೆ ಇವರು ಮಾಯಸಂದ್ರ ಪಂಚಾಯಿತಿ ವ್ಯಾಪ್ತಿಯ ವರಲ್ಲದವರಾಗಿರುವುದು ಒಂದೆಡೆಯಾದರೆ ಇವರು ಸಾಮಾಜಿಕ ಮಾಧ್ಯಮದಲ್ಲಿ ಅಧಿಕಾರಿ ವರ್ಗದವರ ವಿರುದ್ಧ ಹಾಗೂ ಮಾಯಸಂದ್ರ ಪಂಚಾಯಿತಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿರುವುದು ಕಾನೂನು ಉಲ್ಲಂಘನೆಯಾಗಿದ್ದು, ಇವರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸುಮೊಟೋ ಕೇಸ್ ದಾಖಲಿಸಬೇಕೆಂದು ಆಗ್ರಹಿಸಿದರು.
ಮೃತ ಮುತ್ತುರಾಜ್ ಪ್ರಕರಣದಲ್ಲಿ ಅನುಕಂಪದ ಆಧಾರದ ಹುದ್ದೆ ಎಂಬ ಮಾತೇ ಬರುವುದಿಲ್ಲ ಹಾಗೂ ಈಗಾಗಲೇ ಈ ಹುದ್ದೆಗೆ ಸಂಬಂಧಿಸಿದಂತೆ ಮಾಯಸಂದ್ರದ ವ್ಯಕ್ತಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದು ನ್ಯಾಯಾಲಯದ ತೀರ್ಪು ಬರುವವರೆವಿಗೂ ಸದರಿ ಹುದ್ದೆಯ ಆಯ್ಕೆಯನ್ನು ಮಾಡಬಾರದೆಂದು ಮನವಿ ಮಾಡಿದರು. ಒಂದು ವೇಳೆ ನಮ್ಮ ಮನವಿಯನ್ನು ತಿರಸ್ಕರಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಿದರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಾಗುವುದೆಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಾಯಸಂದ್ರ ಗ್ರಾಮದ ಗಂಗಾಧರ್, ಕೃಷ್ಣ, ರೋಹಿತ್, ಹೇಮಂತ್, ಮನು, ರವಿಕುಮಾರ್, ಮಂಜುನಾಥ್ ಸೇರಿದಂತೆ ಇತರರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


