nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸವ ತತ್ವಗಳಿಂದ ಸಾಮಾಜಿಕ ಪಿಡುಗನ್ನು ತೊಲಗಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ
    ತುರುವೇಕೆರೆ May 2, 2026

    ಬಸವ ತತ್ವಗಳಿಂದ ಸಾಮಾಜಿಕ ಪಿಡುಗನ್ನು ತೊಲಗಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ

    By adminMay 2, 2026No Comments2 Mins Read

    ತುರುವೇಕೆರೆ: ಬಸವಣ್ಣನವರ ಆದರ್ಶಗಳನ್ನು ಪಾಲಿಸಿಕೊಂಡು ಸಮಾಜದ ಪಿಡುಗುಗಳನ್ನು ಹೋಗಲಾಡಿಸಲು ಪ್ರಯತ್ನ ಪಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

    ಪಟ್ಟಣದ ಶ್ರೀಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕ, ಮಹಿಳಾ ಮತ್ತು ಯುವ ಘಟಕ ಹಾಗೂ ಎಲ್ಲಾ ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಮಹೋತ್ಸವ ಮತ್ತು ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಹಾಗೂ ತಾಲ್ಲೂಕು ಮಹಿಳಾ ಮತ್ತು ಯುವ ಘಟಕಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜು ಮಾತನಾಡಿ, ಹಿಂದಿನ ದಿನಗಳಲ್ಲಿ ಬಸವೇಶ್ವರ ಜಯಂತಿಯನ್ನು ಮನೆಯಲ್ಲಿನ ಎತ್ತುಗಳನ್ನು ಸಿಂಗರಿಸಿ, ಪೂಜಿಸಿ ಬಸವಣ್ಣನ ಜಯಂತಿ ಎಂದು ಆಚರಿಸಲಾಗುತ್ತಿತ್ತು. 1936ರ ನಂತರ ವೈಚಾರಿಕತೆಯಿಂದ ಬಸವೇಶ್ವರ ತತ್ವಗಳನ್ನು ಅರಿತುಕೊಂಡು ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದರು.

    ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ರಾಜ್ಯಧ್ಯಕ್ಷೆ ಮುಕ್ತಾಂಬ ಮಾತನಾಡಿ, 12 ನೇ ಶತಮಾನದಲ್ಲಿಯೇ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಿ ಮಹಿಳಾ ಮೀಸಲಾತಿ ನೀಡಿದ್ದರು. ಆದರೆ ಇಂದಿನ ಪರಿಸ್ಥಿತಿಯಲ್ಲಿ ಮಹಿಳೆಯರು ಶೇ.33ರಷ್ಟು ಮೀಸಲಾತಿ ಪಡೆಯಲು ಸಾಧ್ಯವಾಗದಂತಾಗಿದೆ ಎಂದರು.

    ಗುಬ್ಬಿ ತಾಲ್ಲೂಕಿನ ಗೊಲ್ಲಹಳ್ಳಿ ಸಿದ್ದಲಿಂಗೇಶ್ವರ ಮಹಾ ಸಂಸ್ಥಾನದ ಡಾ.ಶ್ರೀ ವಿಭವ ವಿದ್ಯಾಶಂಕರ ದೇಶಿಕೇಂದ್ರ ಮಹಾಸ್ವಾಮಿಜಿಗಳ ನೇತೃತ್ವದಲ್ಲಿ ಬೆಳಿಗ್ಗೆ 7ಕ್ಕೆ ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ನಡೆಯಿತು. ವಿಶೇಷ ಸಾಧನೆ ಮಾಡಿದ ಕೊಪ್ಪ ಗ್ರಾಮದ ಶರಣ ಕೆ.ಆರ್. ಶಿವರಾಮ್ (ಕೊಪ್ಪ) ಹಾಗೂ ಚೌಡೇನಹಳ್ಳಿ ಗ್ರಾಮದ ಕುಮಾರಿ ಸ್ಪೂರ್ತಿ ಅವರನ್ನು ಸನ್ಮಾನಿಸಲಾಯಿತು.

    ಈ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಜಿಲ್ಲಾಧ್ಯಕ್ಷ ಡಾ. ಪರಮೇಶ್, ಮಹಿಳಾ ಘಟಕದ ರಾಜ್ಯ ಸಮಿತಿ ಸದಸ್ಯೆ ನಾಗರತ್ನಮ್ಮ, ಯುವ ಘಟಕದ ರಾಜ್ಯಧ್ಯಕ್ಷ ಮನೋಹರ್ ಅಬ್ಬಿಗೆರೆ, ಜಿಲ್ಲಾಧ್ಯಕ್ಷ ದರ್ಶನ್, ತಾಲ್ಲೂಕು ಮಹಿಳಾ ಅಧ್ಯಕ್ಷೆ ದೇವಮ್ಮ ಶಂಕರಪ್ಪ, ಕ.ಸಾ.ಪ. ಅಧ್ಯಕ್ಷೆ ರೂಪ ಶ್ರೀ, ತಾಲ್ಲೂಕು ಯುವಘಟಕದ ಅಧ್ಯಕ್ಷ ನಿಜಗುಣ, ಜಿಲ್ಲಾಘಟಕದ ಕಾರ್ಯದರ್ಶಿ ಟಿ.ಎಂ. ವಿಜಯಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೊಡಗಿಹಳ್ಳಿಸಿದ್ದಲಿಂಗಪ್ಪ, ನೊಳಂಬ ಲಿಂಗಾಯತ ಸಂಘದ ನಿರ್ದೇಶಕ ಎಂ.ದೇವರಾಜು, ವೀರಶೈವ ಸೇವಾ ಸಮಾಜದ ಟ್ರಸ್ಟ್ ಅಧ್ಯಕ್ಷ ಗುರುಚನ್ನಬಸವಯ್ಯ, ಪಾರ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ಪುಷ್ಪಕುಮಾರ್, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಬಡಗರಹಳ್ಳಿನಾಗರಾಜು, ಮಾಜಿ ಅಧ್ಯಕ್ಷ ಪಿ.ಎಚ್.ಧನಪಾಲ್, ಲಿಂಗಾಯತ ಮುಖಂಡರಾದ ಯಡೇಹಳ್ಳಿವಿಶ್ವನಾಥ್, ವೆಂಕಟಾಪುರ ಯೋಗೇಶ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಿವಾನಂದಯ್ಯ, ಕೋಶಾಧ್ಯಕ್ಷ ಡಿ.ಎಂ.ಸುರೇಶ್, ಯುವ ಘಟಕದ ಕಾರ್ಯದರ್ಶಿ ಶಿವರಾಜು, ಸುನಿಲ್ ಬಾಬು ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.