ತುಮಕೂರು (ತಿಪಟೂರು): 2026 — 27ನೇ ಸಾಲಿನ ತಿಪಟೂರು ವಕೀಲರ ಸಂಘದ ಕಾರ್ಯಕಾರಿ ಮಂಡಳಿಯ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಮೂರನೇ ಅವಧಿಗೆ ಎಸ್. ಜಯಣ್ಣ ಶನಿವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಪ್ರಸನ್ನಕುಮಾರ್ ಎಲ್. , ಕಾರ್ಯದರ್ಶಿಯಾಗಿ ಬಿ. ಮಲ್ಲಿಕಾರ್ಜುನಯ್ಯ, ಜಂಟಿ ಕಾರ್ಯದರ್ಶಿಯಾಗಿ ಎಸ್.ಎನ್. ರವಿ, ಖಜಾಂಚಿಯಾಗಿ ಪಿ.ಲಕ್ಷ್ಮೀ, ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಕೆ.ಆರ್.ಉಮೇಶ್, ಜಿ.ಆರ್.ಶ್ರೀನಿವಾಸ್, ಎನ್ .ಸಿ.ಅಶೋಕ್, ಉಮಾದೇವಿ ಕೆ., ಮಮತಾ. ಕೆ.ಎಸ್., ತಿಪಟೂರು ವೆಂಕಟೇಶ್ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಬಸವರಾಜು.ಟಿ. ಕಾರ್ಯನಿರ್ವಹಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಎಸ್. ಜಯಣ್ಣ, ಈ ಹಿಂದೆಯೂ ಸಂಘದಲ್ಲಿ ಕಾರ್ಯನಿರ್ವಹಣೆ ಮಾಡಿದ ಅನುಭವವಿದ್ದು, ಸಂಘದ ಏಳಿಗೆಗಾಗಿ ಶ್ರಮಿಸುತ್ತೇನೆ. ಸುಸಜ್ಜಿತ ಕಟ್ಟಡ, ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಬದ್ಧನಾಗಿದ್ದು ಹಿರಿಯ ಕಿರಿಯ ವಕೀಲರುಗಳ ಸಹಕಾರ ದೊರೆಯಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


