nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026
    Facebook Twitter Instagram
    ಟ್ರೆಂಡಿಂಗ್
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    • ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    ಜಿಲ್ಲಾ ಸುದ್ದಿ May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    By adminMay 4, 2026No Comments1 Min Read
    shringeri

    ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿಯ ಡಿ.ಎನ್. ಜೀವರಾಜ್ ಅವರು ಅಧಿಕೃತವಾಗಿ ಜಯಗಳಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನ ರದ್ದಾದಂತಾಗಿದೆ.

    2023ರ ಚುನಾವಣೆಯಲ್ಲಿ 201 ಮತಗಳಿಂದ ಸೋತಿದ್ದ ಡಿ.ಎನ್. ಜೀವರಾಜ್, ಈಗ ಮರು ಎಣಿಕೆಯ ನಂತರ 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಆದೇಶದ ಮೇರೆಗೆ ಕಳೆದ ಶನಿವಾರ ಅಂಚೆ ಮತಗಳ ಮರು ಪರಿಶೀಲನೆ ಮತ್ತು ಎಣಿಕೆ ನಡೆಸಲಾಗಿತ್ತು.


    Provided by
    Provided by

    ಮರು ಎಣಿಕೆಯ ವೇಳೆ ಕಾಂಗ್ರೆಸ್‌ನ ರಾಜೇಗೌಡ ಅವರಿಗೆ ಈ ಹಿಂದೆ ಬಂದಿದ್ದ ಅಂಚೆ ಮತಗಳಲ್ಲಿ 255 ಮತಗಳು ಅಮಾನ್ಯಗೊಂಡಿವೆ. ಇದರಿಂದಾಗಿ ಅವರ ಒಟ್ಟು ಮತಗಳ ಸಂಖ್ಯೆ ಕುಸಿದಿದ್ದು, ಜೀವರಾಜ್ ಅವರು ಮುನ್ನಡೆ ಸಾಧಿಸಿದರು.

    ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಡಿ.ಎನ್.ಜೀವರಾಜ್ ಅವರಿಗೆ ಶೃಂಗೇರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದ್ದಾರೆ.

    ಈ ಬೆಳವಣಿಗೆಯಿಂದ ಕಾಂಗ್ರೆಸ್ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮತಪತ್ರಗಳನ್ನು ತಿದ್ದಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೊಳ್ಳಿ ಅವರು, ಈ ಹಿಂದಿನ ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ಹಾಗೂ ಡಿ.ಎನ್. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಈ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಜಯನಗರ ಕ್ಷೇತ್ರದಂತೆ ಇಲ್ಲಿಯೂ ಅನ್ಯಾಯವಾಗಿದೆ. ನಾವು ಇದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ ಮತ್ತು ನ್ಯಾಯಾಲಯದಲ್ಲಿ ಹೋರಾಟ ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.

    ಈ ಹಠಾತ್ ಬೆಳವಣಿಗೆಯಿಂದಾಗಿ ಶೃಂಗೇರಿ ಕ್ಷೇತ್ರದಲ್ಲಿ ರಾಜಕೀಯ ಬಿರುಸುಗೊಂಡಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

    May 2, 2026

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ತುಮಕೂರು: ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ ಸೆಟಿ ಸಂಸ್ಥೆಯು ಮೇ ಕೊನೆಯ ವಾರದಲ್ಲಿ 30…

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.