ಚಿಕ್ಕಮಗಳೂರು: ಜಿಲ್ಲೆಯ ತಾಲೂಕಿನ ಅರಳಗುಪ್ಪೆ ಗ್ರಾಮದಲ್ಲಿ ಇಂದು ಎದೆನಡುಗಿಸುವ ಘಟನೆಯೊಂದು ನಡೆದಿದೆ. ಬಾತುಕೋಳಿ ಹಿಡಿಯಲು ಹೋದ ಐವರು ಮಕ್ಕಳ ಪೈಕಿ ನಾಲ್ವರು ಕೆರೆ ನೀರು ಪಾಲಾಗಿದ್ದು, ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ.
ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ಮಕ್ಕಳನ್ನು ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ 5 ರಿಂದ 14 ವರ್ಷದೊಳಗಿನವರಾಗಿದ್ದಾರೆ. ಕೆರೆಯಲ್ಲಿದ್ದ ಬಾತುಕೋಳಿಯನ್ನು ಹಿಡಿಯಲು ಹೋಗಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ನಾಲ್ಕು ವರ್ಷದ ಅರ್ಮಾನ್ ಎಂಬ ಬಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತಪಟ್ಟ ಮಕ್ಕಳು ಸಂಬಂಧಿಕರ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ.
ಮಕ್ಕಳನ್ನು ಕಳೆದುಕೊಂಡ ಪೋಷಕರ ಗೋಳು ಆಸ್ಪತ್ರೆಯ ಮುಂಭಾಗದಲ್ಲಿ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


