ತುಮಕೂರು: ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪತ್ರವನ್ನು ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇ ಮಾಲೀಕರು ನಿಯಮದನ್ವಯ ಅಗತ್ಯ ದಾಖಲೆಗಳನ್ನು ಸಲ್ಲಿಸಿ, ನೋಂದಣಿ ಮಾಡಿಕೊಳ್ಳಲು ಹಾಗೂ ಅಧಿಕೃತವಾಗಿ ನೋಂದಣಿ ಪತ್ರವನ್ನು ಪಡೆದ ನಂತರ ಹೋಂಸ್ಟೇ ಯನ್ನು ನಡೆಸಬೇಕೆಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅನೇಕ ಹೋಂಸ್ಟೇಗಳು ಕಾರ್ಯನಿರ್ವಹಿಸುತ್ತಿವೆ. ಪ್ರವಾಸಿಗರ ಸುರಕ್ಷತೆ, ಗುಣಮಟ್ಟದ ಸೇವೆ, ಕಾನೂನುಬದ್ಧ ನಿರ್ವಹಣೆ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ-2015ರನ್ವಯ ಕಡ್ಡಾಯವಾಗಿ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಾಗಿರುತ್ತದೆ.
ಪ್ರವಾಸಿಗರ ಸುರಕ್ಷತಾ ಹಿತದೃಷ್ಟಿಯಿಂದ ಅಧಿಕೃತ ಅನುಮೋದನೆ ಅಥವಾ ಪರವಾನಗಿ ಪಡೆಯದೆ ಇರುವ ಹೋಂಸ್ಟೇಗಳ ಅನಧಿಕೃತ ಚಟುವಟಿಕೆಗಳನ್ನು ಕೂಡಲೇ ಸ್ಥಗಿತಗೊಳಿಸಲು ತಿಳಿಸಿದೆ.
ಆಸಕ್ತರು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ತುಮಕೂರು ಜಿಲ್ಲೆ ಇವರಿಗೆ ಅಗತ್ಯ ದಾಖಲಾತಿಗಳಾದ ಗ್ರಾಮ ಪಂಚಾಯಿತಿ ನಿರಾಕ್ಷೇಪಣಾ ಪತ್ರ, ಇ-ಖಾತಾ/ಪಹಣಿ, ಪೊಲೀಸ್ ನಿರಾಕ್ಷೇಪಣಾ ಪತ್ರ, ತಹಶೀಲ್ದಾರ್‌ರವರಿಂದ ಪಡೆದಿರುವ ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಮಾಲೀಕರ ಭಾವಚಿತ್ರ ಮತ್ತು ಹೋಂಸ್ಟೇ ಯೋಜನೆಯ ಛಾಯಾಚಿತ್ರಗಳನ್ನು ಸಲ್ಲಿಸಿ, ನೋಂದಣಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ರೆಡ್ ಕ್ರಾಸ್ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ: ಎಫ್ 232, ಅಶೋಕ ರಸ್ತೆ, ತುಮಕೂರು–572101, ದೂರವಾಣಿ ಸಂಖ್ಯೆ: 0816-2006349ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


