ತುಮಕೂರು: ದೇವರಾಯ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರ ಹುಂಡಿ ಹೊಡೆದು ಕಳ್ಳತನ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸದರಿ ದೇವಾಲಯವು ಮುಜರಾಯಿ ಇಲಾಖೆಗೆ ಸೇರಿದ್ದು, ದೇವರ ಪೂಜೆಯನ್ನು ನರಸಿಂಹ ಭಟ್ಟರು ಮಾಡುತ್ತಿದ್ದರು. ಎಂದಿನಂತೆ ಬೆಳಗಿನ ಜಾವ ದೇವಾಲಯದ ಪೂಜೆಯನ್ನು ಮಾಡಿ ದೇಗುಲಕ್ಕೆ ಬೀಗ ಹಾಕಿಕೊಂಡು ಹೋಗಿದ್ದರು. ಸಂಜೆ ಪೂಜೆಗೆಂದು ದೇವಾಲಯಕ್ಕೆ ಬಂದಾಗ ದೇವರ ಹುಂಡಿ ಹೊಡೆದು ಕಳ್ಳತನವಾಗಿರುವಂತಹ ಘಟನೆ ಏ.28ರಂದು ಬೆಳಕಿಗೆ ಬಂದಿದೆ.
ಈ ಸಂಬಂಧ ದೇವಾಲಯದ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ದೇವಾಲಯದ ಹುಂಡಿ ಹೊಡೆದು ಕಳ್ಳತನ ಮಾಡಿರುವ ದೃಶ್ಯ ಬೆಳಕಿಗೆ ಬಂದಿದೆ. ದೇವಾಲಯದ ಹುಂಡಿಯ ಹಣವನ್ನು ಕದ್ದ ಕಳ್ಳನನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸುವಂತೆ ನರಸಿಂಹ ಭಟ್ಟರು ಕ್ಯಾತಸಂದ್ರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


