nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ

    August 26, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    • ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ
    • ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    ರಾಜ್ಯ ಸುದ್ದಿ May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    By adminMay 6, 2026No Comments2 Mins Read

    ಬೆಂಗಳೂರು: ರಾಜ್ಯ ವಸತಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರ ಬೆಂಗಳೂರಿನ ನಿವಾಸದಲ್ಲಿ ನಡೆದಿದ್ದ ಭಾರಿ ಪ್ರಮಾಣದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಶಿವಾಜಿನಗರ ಪೊಲೀಸರು ಭೇದಿಸಿದ್ದಾರೆ. ಸಚಿವರ ತಾಯಿಯ ನಿಕಟ ಸಂಬಂಧಿಯೇ ಈ ಕೃತ್ಯದ ಮಾಸ್ಟರ್ ಮೈಂಡ್ ಆಗಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಸೈಯದ್ ಅಮೀರ್ ಮತ್ತು ಆತನ ಸಹಚರ ಅಮಿರ್ ಅಹ್ಮದ್ ಎಂದು ಗುರುತಿಸಲಾಗಿದೆ. ಸೈಯದ್ ಅಮೀರ್ ಸಚಿವ ಜಮೀರ್ ಅವರ ತಾಯಿಯ ಹತ್ತಿರದ ಸಂಬಂಧಿಯಾಗಿದ್ದು, ಈತನಿಗೆ ಸಚಿವರ ಮನೆಗೆ ಮುಕ್ತ ಪ್ರವೇಶವಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಈತ, 2023ರಿಂದಲೇ ಯಾರಿಗೂ ಅನುಮಾನ ಬಾರದಂತೆ ಸ್ವಲ್ಪ ಸ್ವಲ್ಪವೇ ಚಿನ್ನಾಭರಣಗಳನ್ನು ಕದಿಯುತ್ತಿದ್ದನು. ಒಟ್ಟು ಸುಮಾರು 1.20 ಕೆಜಿ ಚಿನ್ನದ ಆಭರಣಗಳನ್ನು ಈತ ಲಪಟಾಯಿಸಿದ್ದಾನೆ ಎಂದು ತಿಳಿದುಬಂದಿದೆ.

    ಆರೋಪಿಗಳು ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದರು. ಆದರೆ ಕೋವಿಡ್ ಲಾಕ್‌ ಡೌನ್ ಸಮಯದಲ್ಲಿ ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿ ಸಾಲಕ್ಕೆ ಸಿಲುಕಿದ್ದರು. ಈ ಸಾಲ ತೀರಿಸಲು ಮತ್ತು ಕದ್ದ ಚಿನ್ನವನ್ನು ಅಡವಿಟ್ಟು ಬಂದ ಹಣದಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿ ಶ್ರೀಮಂತರಾಗುವ ಆಸೆಯಿಂದ ತನ್ನ ಸಂಬಂಧಿಕರ ಮನೆಯನ್ನೇ ಗುರಿಯಾಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಸಚಿವರ ತಾಯಿ ಏಪ್ರಿಲ್ 15 ರಂದು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಬಗ್ಗೆ ದೂರು ದಾಖಲಿಸಿದ್ದರು. ಮನೆಯಲ್ಲಿದ್ದ ಸುಮಾರು 1.3 ಕೆಜಿ ಚಿನ್ನಾಭರಣಗಳು ನಾಪತ್ತೆಯಾಗಿವೆ ಎಂದು ಅವರು ತಿಳಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ, ಸೈಯದ್ ಅಮೀರ್ ಮೇಲೆ ಅನುಮಾನ ಬಂದಿತ್ತು. ಸಚಿವರ ಮನೆಗೆ ಬರುವುದನ್ನು ಸಡನ್ ಆಗಿ ನಿಲ್ಲಿಸಿದ್ದ ಆತ, ಕುಟುಂಬದವರು ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಂದಿದೆ.

    ಬಂಧಿತರಿಂದ ಪೊಲೀಸರು ಪ್ರಸ್ತುತ 1.13 ಕೋಟಿ ರೂಪಾಯಿ ಮೌಲ್ಯದ 759 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಉಳಿದ ಆಭರಣಗಳ ಪತ್ತೆಗೆ ತನಿಖೆ ಮುಂದುವರಿದಿದೆ. ನಂಬಿಕಸ್ಥ ಸಂಬಂಧಿಯೇ ಇಂತಹ ದ್ರೋಹ ಎಸಗಿರುವುದು ಸಚಿವರ ಕುಟುಂಬಕ್ಕೆ ಆಘಾತ ತಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    ಹಾಸನ:  ಹಾಸನ ಜಿಲ್ಲೆಯ ರೈತರ ಪ್ರಮುಖ ಜೀವನಾಧಾರವಾಗಿರುವ ಮುಸುಕಿನ ಜೋಳದ ಬೆಳೆಗೆ ಬಿಳಿಸುಳಿ (Downy Mildew) ರೋಗ ತೀವ್ರವಾಗಿ ವ್ಯಾಪಿಸಿದ್ದು,…

    ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ

    August 26, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

    August 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.