nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    • ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
    ತಿಪಟೂರು May 8, 2026

    ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ

    By adminMay 8, 2026No Comments1 Min Read
    ಸಾಂದರ್ಭಿಕ ಚಿತ್ರ

    Provided by
    Provided by

    ತಿಪಟೂರು: ತಾಲೂಕಿನ ಕೆ.ಬಿ ಕ್ರಾಸ್‌ ನಲ್ಲಿ ಸಿನಿಮೀಯ ರೀತಿಯಲ್ಲಿ ಎಟಿಎಂ ಡಿಜಿಟಲ್ ಲಾಕರ್ ಒಡೆದು ಹಣ ಕಳವು ಮಾಡಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

    ಮೇ 5ರ ರಾತ್ರಿ, ಕೆ.ಬಿ ಕ್ರಾಸ್‌ ನ ಮಾತಾ ರೆಸಿಡೆನ್ಸಿ ಆವರಣದಲ್ಲಿ ಇರುವ ಎಸ್‌ ಬಿಐ ಬ್ಯಾಂಕ್‌ ಗೆ ಸೇರಿದ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರ ಗುಂಪು, ಎಟಿಎಂ ಯಂತ್ರವನ್ನು ಹಾನಿಗೊಳಿಸಿ ಅದರ ಡಿಜಿಟಲ್ ಲಾಕರ್ ಒಡೆದು ಹಾಕಿದೆ. ಬಳಿಕ ಯಂತ್ರದಲ್ಲಿದ್ದ ಸುಮಾರು 5,94,400 ನಗದು ಹಣವನ್ನು ದರೋಡೆ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ.

    ಘಟನೆ ಮೇ 6ರ ಬೆಳಿಗ್ಗೆ ಬೆಳಕಿಗೆ ಬಂದಿದ್ದು, ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಕೆ.ಬಿ.ಕ್ರಾಸ್ ಪೊಲೀಸರು ಹಾಗೂ ಎಸ್‌ ಬಿಐ ಬ್ಯಾಂಕ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದರು.

    ತಿಪಟೂರು ಡಿವೈಎಸ್ಪಿ ಉಮೇಶ್ ಅವರ ನೇತೃತ್ವದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಚಂದ್ರಶೇಖರ್, ಸಬ್ ಇನ್ಸ್‌ಪೆಕ್ಟರ್ ನಾಗರಾಜು ಹಾಗೂ ಸ್ಲಿಫರ್ ಟೀಂ ಮತ್ತು ಬೆರಳಚ್ಚು ತಜ್ಞರ ತಂಡ ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಎಸ್‌ ಬಿಐ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಕೆ.ಬಿ ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ಇಲ್ಲಿನ ಪಟ್ಟಣದ ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ಸೋಮವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ…

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.