nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ

    May 9, 2026

    ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ

    May 9, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026
    Facebook Twitter Instagram
    ಟ್ರೆಂಡಿಂಗ್
    • ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    • ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
    • ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
    • ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
    • ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
    • ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ
    • ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
    ಜಿಲ್ಲಾ ಸುದ್ದಿ May 9, 2026

    ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ

    By adminMay 9, 2026No Comments3 Mins Read

    ಧಾರವಾಡ: ಪ್ರಸ್ತುತ ಬೇಸಿಗೆ ಅವಧಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ.

    ಇಂದು (ಮೇ 8) ಬೆಳಿಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ (ಗೂಗಲ್ ಮೀಟ್)ದ ಮೂಲಕ ಸಭೆ ಜರುಗಿಸಿ, ಅವರು ಮಾತನಾಡಿದರು.


    Provided by
    Provided by

    ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ಜಿಲ್ಲೆಯ ಕೆರೆಗಳಿಗೆ ಕುಡಿಯುವ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಕೃಷಿಯೇತರ ಚಟುವಟಿಕೆಗಳಿಗೆ ಸಾರ್ವಜನಿಕರು ಕಾಲುವೆ ನೀರು ಬಳಸದಂತೆ ತಡೆಯಲು ಮತ್ತು ನಿಗಾವಹಿಸಲು ರಚಿಸಿರುವ ನೋಡಲ್ ಅಧಿಕಾರಿಗಳ ತಂಡವು ಉತ್ತಮವಾಗಿ ಕಾರ್ಯ ಮಾಡುತ್ತಿವೆ. ಉಳಿದಂತೆ ಗ್ರಾಮೀಣ ಭಾಗದಲ್ಲಿ ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಮತ್ತು ಜಾನುವಾರುಗಳಿಗೆ ಮೇವಿನ ಅಭಾವ ಆಗದಂತೆ ಮುನ್ನಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

    ಗ್ರಾಮೀಣ ಪ್ರದೇಶದಲ್ಲಿ: ಪ್ರಸ್ತುತ 15 ಗ್ರಾಮಗಳಲ್ಲಿ 17 ಖಾಸಗಿ ಕೊಳವೆಬಾವಿ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಿಗೆ ಟ್ಯಾಂಕರ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. ಈಗಾಗಲೇ ಬೇಸಿಗೆ ಪೂರ್ವದಲ್ಲಿ ಸಮೀಕ್ಷೆ ಕೈಗೊಂಡು ಕುಡಿಯುವ ನೀರಿನ ಕೊರತೆ ಉಂಟಾಗಬಹುದೆಂದು ಅಂದಾಜಿಸಿದ ಗ್ರಾಮಗಳಿಗೆ ಅಗತ್ಯವಿದ್ದಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

    ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳಲ್ಲಿ ನವಿಲುತೀರ್ಥ ಜಲಾಶಯದಿಂದ ಕುಡಿಯುವ ನೀರಿನ 60 ಕೆರೆಗಳನ್ನು ನೀರು ಭರ್ತಿ ಮಾಡಿಕೊಳ್ಳಲಾಗಿತ್ತು, ಸದರಿ ತಾಲ್ಲೂಕಿನಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

    ನಗರ ಸ್ಥಳೀಯ ಸಂಸ್ಥೆಗಳು: ಧಾರವಾಡ ಜಿಲ್ಲೆಯ 05 ಸ್ಥಳೀಯ ನಗರ ಸಂಸ್ಥೆಗಳಲ್ಲಿ 100 ವಾರ್ಡ್‍ಗಳಿದ್ದು, ಯಾವುದೇ ವಾರ್ಡ್‍ಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. 80 ವಾರ್ಡ್‍ಗಳಲ್ಲಿ ಪ್ರತಿ ದಿನ ನೀರು ಪೆÇರೈಕೆ ಮಾಡಲಾಗುತ್ತಿದ್ದು, ಉಳಿದ 20 ವಾರ್ಡ್‍ಗಳಲ್ಲಿ 2 ರಿಂದ 3 ದಿನಗಳವರೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮತ್ತು 05 ಸ್ಥಳೀಯ ನಗರ ಸಂಸ್ಥೆಗಳಲ್ಲಿನ ಕೆರೆಗಳಲ್ಲಿ ಕುಡಿಯುವ ನೀರಿನ ಶೇಖರಣೆ ಸಾಕಷ್ಟು ಇರುವುದರಿಂದ ಪ್ರಸ್ತುತ ಬೇಸಿಗೆ ಅವಧಿಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಅಂದಾಜಿಸಲಾಗಿದೆ ಎಂದರು.

    ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ: ಹುಬ್ಬಳ್ಳಿ-ಧಾರವಾಡ ಮಹಾನಗರದ ವ್ಯಾಪ್ತಿಯಲ್ಲಿ 82 ವಾರ್ಡ್‍ಗಳಿದ್ದು, ಅದರಲ್ಲಿ 13 ವಾರ್ಡ್‍ಗಳಲ್ಲಿ 24ಘಿ7 ನೀರು ಪೆÇರೈಕೆ ಮಾಡಲಾಗುತ್ತಿದೆ. ಉಳಿದ ವಾರ್ಡ್‍ಗಳಲ್ಲಿ 2 ರಿಂದ 7 ದಿನಗಳವರೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸರಬರಾಜು ಕುಂದು ಕೊರತೆಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಸಂಖ್ಯೆ: 7996666247 ಆರಂಭಿಸಲಾಗಿದ್ದು, ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಕರೆ ಮಾಡಬಹುದಾಗಿದೆ. ಈ ಕರೆಗಳನ್ನು ಸ್ವೀಕರಿಸಲು ದಿನದ 2 ಶಿಫ್ಟಗಳಲ್ಲಿ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.

    ಈಗಾಗಲೇ ಜಿಲ್ಲೆಯಲ್ಲಿ ಪ್ರಸ್ತುತ 53 ನೀರು ಪೂರೈಕೆ ಟ್ಯಾಂಕರ್‍ಗಳು ಲಭ್ಯವಿದ್ದು, ಮುಂಜಾಗ್ರತೆ ಕ್ರಮವಾಗಿ ಬೇಸಿಗೆಯಲ್ಲಿ ಕುಡಿಯುವ ನೀರು ಅಗತ್ಯವಾದ ಗ್ರಾಮ ಅಥವಾ ವಾರ್ಡ್‍ಗಳಿಗೆ ತಕ್ಷಣ ನೀರು ಪೂರೈಕೆ ಮಾಡಲು ಅನುವುವಾಗುವಂತೆ ಹೆಚ್ಚುವರಿ ನೀರಿನ ಟ್ಯಾಂಕರ್‍ಗಳ ವ್ಯವಸ್ಥೆ ಮಾಡಲಾಗುವುದು ಎಂದರು.

    ಧಾರವಾಡ ಜಿಲ್ಲೆಯ ಮೇವಿನ ಲಭ್ಯತೆ: ಧಾರವಾಡ ಜಿಲ್ಲೆಯಲ್ಲಿ 2,35,059 ಜಾನುವಾರುಗಳಿದ್ದು, 5,16,834.81 ಟನ್ ಗಳಷ್ಟು ಮೇವಿನ ದಾಸ್ತಾನುವಿದ್ದು, 50 ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇದೆ. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಧಾರವಾಡ ಜಿಲ್ಲೆಯಲ್ಲಿ ತಾಪಮಾನ: ಧಾರವಾಡ ಜಿಲ್ಲೆಯಲ್ಲಿ ಪ್ರಸ್ತುತ ಕನಿಷ್ಠ ತಾಪಮಾನ 23.7°C (ಸೆಲ್ಸಿಸ್) ರಿಂದ 24.5 ಹಾಗೂ ಗರಿಷ್ಠ ತಾಪಮಾನ 37.6 °C (ಸೆಲ್ಸಿಸ್) ರಿಂದ 38.6 °C (ಸೆಲ್ಸಿಸ್) ಕ್ಕಿಂತ ಹೆಚ್ಚು ತಾಪಮಾನ ದಾಖಲಾಗಿದೆ. ಅತೀ ಹೆಚ್ಚು ತಾಪಮಾನ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಸರ್ಕಾರ ಹಾಗೂ ಜಿಲ್ಲಾಡಳಿತ ನೀಡಿರುವ ಸಲಹೆ, ಸೂಚನೆಗಳನ್ನು ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮಗಳಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯುವುದು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡುವುದು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು  ಅನ್ನು ಬಳಸುವುದು. ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ. ಅನಾನಸ್, ಸೌತೆಕಾಯಿ, ಲೆಟೂಸ್, ಎಳೆ ನೀರುಗಳನ್ನು ಹೆಚ್ಚಾಗಿ ಸೇವಿಸಬೇಕು. ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ, ಟೋಪಿ ಅಥವಾ ಕ್ಯಾಪ್, ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಯೂಲೈಟ್, ಗ್ಲೋಕೋಸ್, ಓಆರ್‍ಎಸ್ ನ್ನು ತೆಗೆದುಕೊಂಡು ಹೋಗಬೇಕು.

    ಅತೀ ಹೆಚ್ಚು ತಾಪಮಾನದಿಂದ ಉದ್ಭವಿಸಬಹುದಾದ ರೋಗ ಲಕ್ಷಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಕಾಲಕಾಲಕ್ಕೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವುದು. ಭಾರತೀಯ ಹವಾಮಾನ ಇಲಾಖೆಯು ಹಾಗೂ ರಾಜ್ಯ ಹವಾಮಾನ ಇಲಾಖೆಯು ನೀಡುವ ಸೂಚನೆಗಳನ್ನು ಪಾಲಿಸುವದರಿಂದ ಸುರಕ್ಷಿತ ಆರೋಗ್ಯ ಪಡೆಯಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸೇರಿದಂತೆ ಕೃಷಿ, ತೋಟಗಾರಿಕೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ನೀರಾವರಿ ಇಲಾಖೆ, ಎಲ್ಲ ತಾಲೂಕುಗಳ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ

    May 5, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ

    May 9, 2026

    ತುಮಕೂರು: ಡಾ. ಜಿ.ಎಸ್. ಸಿದ್ದಲಿಂಗಯ್ಯನವರ ಬದುಕು-ಬರಹ ವಿಚಾರ ಸಂಕಿರಣ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದತ್ತಿ ಪ್ರಶಸ್ತಿ ಸಮಾರಂಭವನ್ನು…

    ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ

    May 9, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ

    May 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.