ಕುಣಿಗಲ್: ತಾಲ್ಲೂಕಿನ ಜಿಗಿಣಿಪಾಳ್ಯದ ಬಳಿಯ ರಾಜ್ಯ ಹೆದ್ದಾರಿ 33ರಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಡ್ಯ ಮೂಲದ ಕುಮಾರ ನರಸಿಂಹ ಸ್ವಾಮಿ (65) ಮತ್ತು ಅವರ ಪತ್ನಿ ಗಾಯತ್ರಿ (63) ಮೃತಪಟ್ಟ ದಂಪತಿಗಳೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇತರ ಇಬ್ಬರು ವ್ಯಕ್ತಿಗಳ ವಿಳಾಸ ಮತ್ತು ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ.
ತುಮಕೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಎದುರುಗಡೆಯಿಂದ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ತೀವ್ರ ಸ್ವರೂಪದ ಗಾಯಗಳಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ನಜ್ಜುಗುಜ್ಜಾಗಿದ್ದ ಕಾರಿನಿಂದ ಶವಗಳನ್ನು ಹೊರತೆಗೆಯಲು ಸಾಕಷ್ಟು ಹರಸಾಹಸ ಪಡಬೇಕಾಯಿತು. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


