nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ
    • ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ
    • ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
    • ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    • ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
    • ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ
    ರಾಜ್ಯ ಸುದ್ದಿ May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    By adminMay 10, 2026No Comments2 Mins Read

    ಬೆಂಗಳೂರು: ಕರ್ನಾಟಕ ಸರ್ಕಾರದ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

    ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯ ರಾಜಕಾರಣಿಯಾಗಿದ್ದರು. ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.


    Provided by
    Provided by

    ಮೂಲಗಳ ಪ್ರಕಾರ, ಅವರಿಗೆ ಹೃದಯ ಸಂಬಂಧಿ ಸಮಸ್ಯೆಗಳಿದ್ದವು ಎಂದು ತಿಳಿದುಬಂದಿದೆ. ಆರೋಗ್ಯ ಸ್ಥಿತಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದೆ.

    ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ವ್ಯವಸ್ಥೆ ಮಾಡಿ, ನಂತರ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು.

    ಜನಸೇವೆಯಲ್ಲಿ‌ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ.

    ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

    — ಸಿಎಂ ಸಿದ್ದರಾಮಯ್ಯ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    ತುಮಕೂರು: ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಎ. ಮಹಾಲಿಂಗಯ್ಯನವರ ನೇತೃತ್ವದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ…

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026

    ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು

    May 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.