nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    ತುಮಕೂರು May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    By adminMay 11, 2026No Comments2 Mins Read

    ತುಮಕೂರು: ಸಮರ್ಪಕವಾಗಿ ಸಾಲ ವಸೂಲಿಯಾಗದಿದ್ದರೆ ಯಾವುದೇ ಹಣಕಾಸು ಸಂಸ್ಥೆ ಆರೋಗ್ಯಕರವಾಗಿರುವುದಿಲ್ಲ. ಆರ್ಥಿಕ ಶಿಸ್ತು, ಶ್ರದ್ಧೆಯಿಂದ ಶ್ರಮಿಸಿದರೆ ಸಂಸ್ಥೆ ಬೆಳವಣಿಗೆಯಾಗುತ್ತದೆ. ಹರ್ತಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯವರು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಾ ಸಂಘದ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ. ಈ ಸಂಘ ಬ್ಯಾಂಕ್ ಆಗಿ ಪರಿವರ್ತನೆಯಾಗಲಿ ಎಂದು ಹರ್ತಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರೂ ಆದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

    ಭಾನುವಾರ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹಿಂಭಾಗ ಹರ್ತಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನಂತರ ನಡೆದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಚಿವರು, ಇಂದು ಸಹಕಾರ ಕ್ಷೇತ್ರ ದೊಡ್ಡ ಮಟ್ಟದಲ್ಲಿ ಬೆಳವಣಿಗೆಯಾಗಿದೆ. ನಮ್ಮ ಸಂಘವನ್ನು ದೊಡ್ಡದಾಗಿ ಬೆಳೆಸಿ ಹೆಚ್ಚು ಜನರಿಗೆ ಅದರ ಪ್ರಯೋಜನ ದೊರೆಯಲು ಎಲ್ಲರೂ ಕಾಳಜಿಯಿಂದ ಶ್ರಮಿಸಬೇಕು ಎಂದು ಹೇಳಿದರು.


    Provided by
    Provided by

    ಸಮುದಾಯದ ಮಕ್ಕಳ ವ್ಯಾಸಂಗ ಹಾಗೂ ಸಮುದಾಯದ ಸಂಘಟನೆಯ ಉದ್ದೇಶದಿಂದ ತಮ್ಮ ತಂದೆ ಹೆಚ್.ಎಂ. ಗಂಗಾಧರಯ್ಯನವರು ಹರ್ತಿ ಪತ್ತಿನ ಸಹಕಾರ ಸಂಘ ಸ್ಥಾಪಿಸಿದರು. ತಾವು ಸಂಘಕ್ಕೆ 2 ಕೋಟಿ ರೂ. ಠೇವಣಿ ನೀಡಿದ್ದು, ಕೇವಲ ಠೇವಣಿ ಸಂಗ್ರಹ ಮಾತ್ರವಲ್ಲದೆ ಸಂಘಕ್ಕೆ ಹೆಚ್ಚು ಜನ ಷೇರುದಾರರನ್ನು ಸದಸ್ಯರನ್ನಾಗಿ ಮಾಡಿ ಸಂಘವನ್ನು ಬೆಳೆಸಬೇಕು. ಅಗತ್ಯವಿರುವವರು ಸಂಘದಿಂದ ಆರ್ಥಿಕ ಚಟುವಟಿಕೆ ನಡೆಸಲು ಸಹಾಯವಾಗಬೇಕು. ಮುಂದೆ ಬ್ಯಾಂಕ್ ಆಗಿ ಪರಿವರ್ತಿಸಿ ಸರ್ಕಾರದಿಂದ ಸಿಗಬಹುದಾದ ಅನುಕೂಲಗಳನ್ನು ಪಡೆಯುವ ಬಗ್ಗೆ ಗಮನಹರಿಸಬೇಕು ಎಂದು ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

    ಇದೇ ವೇಳೆ ಸಂಘದ ಹಾಗೂ ಸಮುದಾಯದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಚಿವ ಡಾ. ಜಿ. ಪರಮೇಶ್ವರ್ ಅವರ ಪತ್ನಿ ಕನ್ನಿಕಾ ಪರಮೇಶ್ವರ್, ಹಿರಿಯ ಹರಿಕಥಾ ವಿದ್ವಾನ್ ಡಾ. ಲಕ್ಷ್ಮಣ ದಾಸ್, ಭಲವಡಿ ಮಹಾಸಭಾದ ಜಿಲ್ಲಾಧ್ಯಕ್ಷ ಚಂದ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಬೆಸ್ಕಾಂ ನಿವೃತ್ತ ಎಂ.ಡಿ. ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್, ವಾರ್ತಾ ಇಲಾಖೆ ಉಪನಿರ್ದೇಶಕ ಓಮಂತರಾವ್, ರೇಷ್ಮೆ ಇಲಾಖೆ ಉಪನಿರ್ದೇಶಕ ಲಕ್ಷ್ಮೀನರಸಯ್ಯ, ಮುಖಂಡರಾದ ಭಾನುಪ್ರಕಾಶ್, ಲಿಂಗರಾಜು, ಸಂಜೀವಪ್ಪ, ಸಂಘದ ನಿರ್ದೇಶಕರುಗಳಾದ ಡಾ.ವೈ. ದಾಸಪ್ಪ, ಸಿ.ಹೆಚ್. ಲಕ್ಷ್ಮಯ್ಯ, ವಿ. ಮೋಹನ್ ಕುಮಾರ್, ಬಿ.ಜಿ. ನಿಂಗರಾಜು, ಡಾ. ಎನ್. ಸತೀಶ್ ಬಾಬು, ಸಿ. ಆದಿನಾರಾಯಣ, ಬಿ. ಶಿವಣ್ಣ, ಎಂ.ಎನ್. ತಿಪ್ಪೇಸ್ವಾಮಿ, ಹೆಚ್.ಎಂ. ಸುರೇಶ್, ಶೆಟ್ಟಳ್ಳಯ್ಯ, ಆರ್. ಸಿದ್ದರಾಮಯ್ಯ, ಬಿ.ಆರ್. ರತ್ನಮ್ಮ, ಎಂ. ವಿಮಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ಶಿವರಾಜು ಮತ್ತಿತರ ಮುಖಂಡರು ಭಾಗವಹಿಸಿದ್ದರು.

    ಹರ್ತಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಬಿ.ಎಸ್. ದಿನೇಶ್ ಮಾತನಾಡಿ, 1994ರಲ್ಲಿ ಆರಂಭವಾದ ಸಂಘ ಹಂತ ಹಂತವಾಗಿ ಬೆಳವಣಿಗೆಯಾಗುತ್ತಾ ಪ್ರಸ್ತುತ 3600 ಸದಸ್ಯರನ್ನು ಹೊಂದಿದೆ. ಸಂಘದಿಂದ ಅನೇಕರು ಅನುಕೂಲ ಪಡೆದಿದ್ದಾರೆ. ಈಗ ನಿಯಮಿತವಾಗಿ ಸಾಲ ವಸೂಲಾತಿಯಾಗಿ ಪ್ರಗತಿಯತ್ತ ಸಾಗಿದೆ. ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯರಾಗಿ ಬೆಳವಣಿಗೆಗೆ ಸಹಕರಿಸಬೇಕು ಎಂದು ಕೋರಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ

    May 10, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಪಾವಗಡ: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಮ್ ಯುವಕ ಸಂಘದ ಕರೆಕ್ಯಾತನಹಳ್ಳಿ ವತಿಯಿಂದ ಅಂಬೇಡ್ಕರ್ ಅವರ 135ನೇ…

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.