ಸಿರಾ: ತಾಲ್ಲೂಕಿನ ನವ್ಯದಿಶ ಸಂಸ್ಥೆಯ ಯುವಚಾವಡಿ ಕಾರ್ಯಕ್ರಮದಡಿ ಯೂತ್ ರಿಸೋರ್ಸ್ ಹಬ್‌ನ ಹದಿಹರೆಯದವರು ಮತ್ತು ಯುವಜನರಿಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮದಡಿ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಎ.ಎಸ್.ಐ ಶ್ರೀನಿವಾಸ್ ಮಾತನಾಡಿ, ದೂರು ದಾಖಲಿಸುವ ಬಗ್ಗೆ, ಎಫ್.ಐ.ಆರ್., ಪೋಕ್ಸೋ ಪ್ರಕರಣಗಳ ಬಗ್ಗೆ ಹಾಗೂ ಪೊಲೀಸ್ ಠಾಣೆಯ ಮಹತ್ವ ಅದರ ಕಾರ್ಯವೈಖರಿ ಹಾಗೂ ಸಾಮಾಜಿಕ ಜಾಲತಾಣಗಳಿಂದ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಬಗ್ಗೆ, ಹಾಗಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗರೂಕರಾಗಿರುವ ಬಗ್ಗೆ ಎಂದು ತಿಳಿಸಿದರು.
ಯುವಜನರು ಪೊಲೀಸ್ ಇಲಾಖೆಗೆ ಸಂಬಂಧಪಟ್ಟಂತೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊತ್ತಿರುವ ಯುವಜನರು ಅವರ ಕೆಲಸಗಳು, ಪರೀಕ್ಷೆಗಳ ಮಾಹಿತಿ ಕುರಿತು ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ನವ್ಯದಿಶ ಸಂಸ್ಥೆಯ ತ್ರಿವೇಣಿ, ಯೂತ್ ರಿಸೋರ್ಸ್ ಹಬ್‌ನ ಹದಿಹರೆಯದವರು, ಯುವಜನರು ಇದ್ದರು.
ಇಂದು ಹದಿಹರೆಯದವರ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವುದು ಅಗತ್ಯವಿದೆ. ಹಾಗೆ ಹದಿಹರೆಯದವರು ತಮಗೆ ತೊಂದರೆಯಾದಾಗ ನಿರ್ಭೀತಿಯಿಂದ ಪೊಲೀಸ್ ಇಲಾಖೆಯ ರಕ್ಷಣೆ ಪಡೆಯಬಹುದು.
— ಅಶ್ವಿನಿ, ನವ್ಯದಿಶ ಸಂಸ್ಥೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


