ತುಮಕೂರು/ಬೆಂಗಳೂರು: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.
ಈ ಸಂಸ್ಥೆಯು ಪಾಲಿಮರ್ / ಪೆಟ್ರೋಕೆಮಿಕಲ್ಸ್ / ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡುತ್ತಾ ಬಂದಿದೆ.
ಸಿಐಪಿಇಟಿ 2026–27ನೇ ಸಾಲಿನ ಉದ್ಯೋಗಾಧಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ, ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಮೂರು ವರ್ಷಗಳ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ., ಪಿಯುಸಿ ಮತ್ತು ಐಟಿಐ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಆನ್‌ಲೈನ್ / ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪಿಯುಸಿ (ವಿಜ್ಞಾನ), ಐಟಿಐ ತೇರ್ಗಡೆಯಾದವರು ಡಿಪ್ಲೊಮಾ 2ನೇ ವರ್ಷಕ್ಕೆ ಪ್ರವೇಶ ಪಡೆಯಬಹುದು. ಅರ್ಜಿ ಸಲ್ಲಿಸಲು ಮೇ 28 ಕಡೆಯ ದಿನವಾಗಿದೆ.
https://cipet26.onlineregistrationform.org/CIPET ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9380756024, 9480253024 ಇವರನ್ನು ಸಂಪರ್ಕಿಸುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


