ತುಮಕೂರು: ಪಾವಗಡ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಪಾವಗಡ ಪಟ್ಟಣದ ಭಾರತ ರತ್ನ ಡಾ: ಬಿ.ಆರ್.ಅಂಬೇಡ್ಕರ್ ವಸತಿ ಪಾಠಶಾಲೆಯಲ್ಲಿ 2026–27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪ.ಜಾತಿ, ಪ.ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಮೇ 30ರೊಳಗಾಗಿ ವಸತಿ ಪಾಠಶಾಲೆಯಲ್ಲಿಯೇ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪಾವಗಡ ಅಥವಾ ಮುಖ್ಯ ಶಿಕ್ಷಕರು, ಭಾರತ ರತ್ನ ಡಾ: ಬಿ.ಆರ್. ಅಂಬೇಡ್ಕರ್ ವಸತಿ ಪಾಠಶಾಲೆ, ಪಾವಗಡ ಟೌನ್ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


