ತುಮಕೂರು: ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ ಕದರೇನಳ್ಳಿ ಲಂಬಾಣಿ ತಾಂಡಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ವಸತಿ ಸೌಲಭ್ಯವಿಲ್ಲದೆ ಸಂಕಷ್ಟದಲ್ಲಿರುವ 25 ಕುಟುಂಬಗಳಿಗೆ ತುಮಕೂರಿನಲ್ಲಿ 2026ರ ಮೇ 20ರಂದು ನಡೆಯಲಿರುವ ಮುಖ್ಯಮಂತ್ರಿಗಳ ಮೂರನೇ ವರ್ಷದ ಸಾಧನೆ ಸಂಭ್ರಮ ಸಮಾವೇಶಕ್ಕೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಯಿತು.
ಗ್ರಾಮದ ಮೂಲಭೂತ ಸೌಲಭ್ಯಗಳು ಹಾಗೂ ವಸತಿ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಮಾಹಿತಿ ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ತುಮಕೂರು ಉಪ ವಿಭಾಗಾಧಿಕಾರಿ ನಹಿದಾ ಜಮ್ ಜಮ್, ತಹಶೀಲ್ದಾರ್ ರಾಜೇಶ್ವರಿ ಹಾಗೂ ಕಂದಾಯ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


