nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ
    ಕೊರಟಗೆರೆ May 15, 2026

    ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ

    By adminMay 15, 2026No Comments2 Mins Read
    sidharabetta

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ದೇಶದಲ್ಲಿ ತೀವ್ರ ಬೇಸಿಗೆಯಿಂದ ಜನ ಹಾಗೂ ಜಾನುವಾರುಗಳು ಸಂಕಷ್ಟ ಅನುಭವಿಸುತ್ತಿದ್ದು, ಮಹಾಶಕ್ತಿ ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆಯ ಆಗಮನವಾಗಿ ಸಮಸ್ತ ಜನತೆಗೆ ನೆಮ್ಮದಿ ದೊರಕಲಿ ಎಂದು ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಶುಭ ಹಾರೈಸಿದರು.

    ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾ.ಪಂ ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದ ಶ್ರೀಮಹಾಶಕ್ತಿ ಮಾರಮ್ಮ ದೇವಿ ಹಾಗೂ ಶ್ರೀ ಅಥವರ್ಣ ಭದ್ರಕಾಳಿ ಅಮ್ಮನವರ ವರಧಂತಿ ಕಾರ್ಯಕ್ರಮ ಹಾಗೂ 77ನೇ ದಿನದ ಮಂಡಲದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

    ಎಲೆರಾಂಪುರ ನರಸಿಂಹಗಿರಿ ಸುಕ್ಷೇತ್ರ ಪರಮಪೂಜ್ಯ ಡಾ.ಶ್ರೀಹನುಮಂತನಾಥ ಸ್ವಾಮೀಜಿ ಮಾತನಾಡಿ, ಭಾರತ ದೇಶದಲ್ಲಿ ಧಾರ್ಮಿಕ ಕ್ಷೇತ್ರವು ವಿಶೇಷ ಪಾವಿತ್ರ್ಯತೆ ಹೊಂದಿದೆ. ಧಾರ್ಮಿಕ ಶ್ರದ್ಧಾ ಕೇಂದ್ರಗಳು ಹೆಚ್ಚಾದಷ್ಟು ಅಧರ್ಮ ಅಂತ್ಯವಾಗಿ ಧರ್ಮ ಉಳಿಯಲಿದೆ. ತಾಯಿಯ ಮಹಿಮೆ ಜಗತ್ತಿಗೆ ಅರಳಿ ಭಕ್ತರ ಕಷ್ಟಗಳಿಗೆ ಪರಿಹಾರ ಸಿಗಲಿ ಎಂಬುದು ನಮ್ಮೆಲ್ಲರ ಪ್ರಾರ್ಥನೆಯಾಗಿದೆ ಎಂದು ಹೇಳಿದರು.

    ಕನ್ನಡ ಚಲನಚಿತ್ರ ನಿರ್ದೇಶಕ ಶಶಾಂಕ್‌ ರಾಜ್ ಮಾತನಾಡಿ, ಚಿಕ್ಕನಹಳ್ಳಿ ಗ್ರಾಮಕ್ಕೆ ಮಹಾಶಕ್ತಿ ಮಾರಮ್ಮ ಮತ್ತು ಚೌಡೇಶ್ವರಿ ತಾಯಿ ನೆಲೆಯಿಂದ ವಿಶೇಷ ಕಳೆ ಬಂದಿದೆ. ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯದ ಮೂಲೆ ಮೂಲೆಗೂ ತಾಯಿ ಮಹಿಮೆ ಹರಡುತ್ತಿದೆ. ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಸಹಕಾರದಿಂದ ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದರು.

    ಈ ವೇಳೆ ಉದ್ಯಮಿ ಎಂ.ಎನ್.ಜೆ ಮಂಜುನಾಥ್, ಬೈಚಾಪುರ ಗ್ರಾ.ಪಂ ಮಾಜಿ ಸದಸ್ಯ ವೆಂಕಟರೆಡ್ಡಿ, ಮುಖಂಡರಾದ ಜಯರಾಮ್, ಶ್ರೀನಿವಾಸ್, ಸುರೇಶ್, ಜಗದೀಶ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

    ಯಶಸ್ವಿಗೊಂಡ ಧಾರ್ಮಿಕ ಪೂಜೆಗಳು:

    ಚಿಕ್ಕನಹಳ್ಳಿ ಶ್ರೀಮಹಾಶಕ್ತಿ ಮಾರಮ್ಮ ದೇವಿ ಹಾಗೂ ಅಥವರ್ಣ ಭದ್ರಕಾಳಿ ಅಮ್ಮನವರ ವರದಂತಿ ಕಾರ್ಯಕ್ರಮ ಹಾಗೂ 77ನೇ ದಿನದ ಮಂಡಲ ಪೂಜೆ ಅಂಗವಾಗಿ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಡಾ.ಶ್ರೀಹನುಮಂತನಾಥ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಕೇರಳ ವೇದಬ್ರಹ್ಮ ಸಂಗೀತ ಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಪಂಚಾಮೃತ ಅಭಿಷೇಕ, ದುರ್ಗಾಹೋಮ, ಚಂಡಿ ಹೋಮ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ಈಗೇ ಹಲವು ಪೂಜೆಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆದವು.

    ಮಹಾಶಕ್ತಿ ಮಾತೆಯರ ಕೃಪೆ ಇರಲಿ..

    ತಮಿಳುನಾಡು ಹಾಗೂ ಕೇರಳದಲ್ಲಿ ಅನೇಕ ಗುರುಗಳ ಬಳಿ ಪಾಂಡಿತ್ಯ ವಿದ್ಯೆಗಳನ್ನು ಅಭ್ಯಾಸ ಮಾಡಿ ದೇವಿಯ ಆರಾಧನೆ ಮಾಡುತ್ತಿರುವ ರಾಜು ಸ್ವಾಮೀಜಿಗಳಿಗೆ ದೇವಿಯ ವಿಶೇಷ ಅನುಗ್ರಹವಿದೆ. ಈ ಸನ್ನಿಧಾನಕ್ಕೆ ಬರುವ ಎಲ್ಲಾ ಭಕ್ತಾದಿಗಳ ಮೇಲೂ ಮಹಾಶಕ್ತಿ ಮಾತೆಯರ ಕೃಪೆ ಸದಾ ಇರಲಿ.

    —  ಶ್ರೀಸಂಗೀತ ಕುಮಾರ ಸ್ವಾಮೀಜಿ, ಕೇರಳ.

     

     ಲೋಕ ಕಲ್ಯಾಣಾರ್ಥವಾಗಿ ನಡೆದ ಪೂಜೆ

    ಲೋಕ ಕಲ್ಯಾಣಾರ್ಥವಾಗಿ 77ನೇ ದಿನದ ಮಂಡಲ ಪೂಜೆ, ಅಥವರ್ಣ ಭದ್ರಕಾಳಿ ಅಮ್ಮನವರ ವರದಂತಿ ಕಾರ್ಯಕ್ರಮ ಪೂಜ್ಯ ಗುರುಗಳ ಸಾನಿಧ್ಯದಲ್ಲಿ ಯಶಸ್ವಿಯಾಗಿದೆ. ಈ ವರ್ಷದ ಮಳೆ, ಬೆಳೆ ಎಲ್ಲವೂ ಶುಭವಾಗಿ ನಡೆಯಲಿ. ಮೈಸೂರು, ಮುಳಬಾಗಿಲು, ತುಮಕೂರು, ಬೆಂಗಳೂರು ಮತ್ತು ಆಂಧ್ರಪ್ರದೇಶ ಭಾಗದಿಂದ ಹಲವಾರು ಭಕ್ತರು ಆಗಮಿಸಿ ತಾಯಿಯ ದರ್ಶನ ಪಡೆಯುತ್ತಿದ್ದಾರೆ.

    — ರಾಜು ಸ್ವಾಮಿ, ಪ್ರಧಾನ ಅರ್ಚಕ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.