ತುಮಕೂರು: ನಗರ ಹೊರವಲಯದ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ರೈಸ್ ಮಿಲ್ ಪ್ರಾಂಗಣದಲ್ಲಿ ಮಲಗಿದ್ದ ಕಾರ್ಮಿಕನ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಮನಕಲಕುವ ಘಟನೆ ವರದಿಯಾಗಿದೆ.
ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಗೊಲ್ಲರಹಟ್ಟಿಯ ಬಿ.ರಂಗನಾಥ್ (36) ಮೃತ ದುರ್ದೈವಿಯಾಗಿದ್ದಾರೆ.
ಮೇ 13ರಂದು ರಾತ್ರಿ ತಾನೂ ಕೆಲಸ ಮಾಡುತ್ತಿದ್ದ ಅಂತರಸನಹಳ್ಳಿಯ ಬಾಲರಾಮೇಶ್ವರ ರೈಸ್ ಮಿಲ್ ಅಂಗಳದಲ್ಲಿ ಚಾಪೆ ಹಾಸಿಕೊಂಡು ಮಲಗಿದ್ದಾಗ, ರೈಸ್ ಮಿಲ್‌ನಿಂದ ಹೊರಹೋಗಲು ಮುಂದಾದ ಲಾರಿ ಚಾಲಕನ ನಿರ್ಲಕ್ಷ್ಯತೆಯಿಂದ ರಂಗನಾಥ್ ಮೇಲೆ ಹರಿಸಿಕೊಂಡು ಹೋಗಿದ್ದು ರಕ್ತಸ್ರಾವವಾಗಿ ರಂಗನಾಥ್ ಮೃತಪಟ್ಟಿದ್ದಾರೆ. ಈ ಸಂಬಂಧ ಮೃತನ ಪತ್ನಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


