ಹುಳಿಯಾರು: ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಪೋಷಕ-ಶಿಕ್ಷಕ ಸಂಘದ ವತಿಯಿಂದ ವಿಶ್ವ ತಾಯಂದಿರ ದಿನಾಚರಣೆ ಹಾಗೂ ಪೋಷಕ–ಶಿಕ್ಷಕ ಸಂಘದ ಸಭೆಯನ್ನು ಇದೇ ತಿಂಗಳ 20ರಂದು ಮಧ್ಯಾಹ್ನ 2 ಗಂಟೆಗೆ ಕಾಲೇಜಿನ ಎ.ವಿ. ಹಾಲ್ನಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ವೀರಣ್ಣ ಎಸ್.ಸಿ. ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಲೇಜಿನ ಸಿಡಿಸಿ ಸರ್ವ ಸದಸ್ಯರುಗಳು ಹಾಗೂ ಪೋಷಕರ ಕಾರ್ಯಕಾರಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ಶಿಸ್ತು, ಪರೀಕ್ಷಾ ಫಲಿತಾಂಶ ಹಾಗೂ ಕಾಲೇಜಿನ ವಿವಿಧ ಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ತಾಯಂದಿರನ್ನು ಗೌರವಿಸುವ ಸಲುವಾಗಿ ವಿಶ್ವ ತಾಯಂದಿರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


