ಸಿರಾ: ನಗರದ ನಗರಸಭಾ ವ್ಯಾಪ್ತಿಗೆ ಒಳಪಡುವ 31ನೇ ವಾರ್ಡ್‌ನ ಬುಕ್ಕಾಪಟ್ಟಣ ವೃತ್ತದಲ್ಲಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ನಿರ್ಮಾಣ ಮಾಡಲಾದ ಸಾರ್ವಜನಿಕ ಶೌಚಾಲಯವನ್ನು ಉದ್ಘಾಟನೆ ಮಾಡದೆ ಕೈಚೆಲ್ಲಿ ಕೂರಲಾಗಿದ್ದು ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಸಾರ್ವಜನಿಕರು, ಸದರಿ ಶೌಚಾಲಯವನ್ನು ಬೆಂಗಳೂರಿನ ಸೌಥರ್ನ್ ಫೌಂಡೇಶನ್ ವತಿಯಿಂದ ನಿರ್ಮಾಣ ಮಾಡಲಾಗಿದ್ದು ಕಾಮಗಾರಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಸದರಿ ಶೌಚಾಲವು ಉದ್ಘಾಟನೆಯೇ ಆಗಿಲ್ಲ ಎಂದು ಆರೋಪಿಸಿದ್ದಾರೆ.
ಶೌಚಾಲಯ ಕಾಮಗಾರಿ ಪೂರ್ಣಗೊಂಡು ಶೌಚಾಲಯದ ನೀರು ಶೇಖರಣೆಗೊಳ್ಳಲು ಪಿಟ್ ಗುಂಡಿಯನ್ನು ತೆರೆದು ಅದರ ಕಾಮಗಾರಿ ಮಾಡದೆ ಕೈಬಿಡಲಾಗಿದ್ದು ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ.
ನಗರಸಭೆಯ ನಗರೋತ್ಥಾನ ಯೋಜನೆಯ ಅನುದಾನದಲ್ಲಿ ಈ ಕಾಮಗಾರಿ ಮಾಡಲಾಗಿದ್ದು ಈ ಕೂಡಲೇ ನಗರಸಭೆಯ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


