ಕೊರಟಗೆರೆ: ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಅಂಗವಾಗಿ ಕೊರಟಗೆರೆ ತಾಲ್ಲೂಕು ಆಡಳಿತ ಕಂದಾಯ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿ ಒಟ್ಟು 13,353 ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವ ಮೂಲಕ ಹೊಸ ಮೈಲಿಗಲ್ಲು ನಿರ್ಮಿಸಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಇ–ಪೌತಿ ಆಂದೋಲನದಡಿ 8,018 ಫಲಾನುಭವಿಗಳಿಗೆ ಇ–ಪೌತಿ ವಿತರಣೆ ಮಾಡಲಾಗಿದೆ. ಬಹುಕಾಲದಿಂದ ಬಾಕಿ ಉಳಿದಿದ್ದ 273 ದರಖಾಸ್ತು ಪೋಡಿ ಪ್ರಕರಣಗಳನ್ನು ಕಾರ್ಯರೂಪಕ್ಕೆ ತಂದು ರೈತರು ಹಾಗೂ ಭೂಸ್ವಾಮಿಗಳಿಗೆ ನೆಮ್ಮದಿ ಕಲ್ಪಿಸಲಾಗಿದೆ.
ಸವಲತ್ತುಗಳಿಂದ ವಂಚಿತವಾಗಿದ್ದ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸುವ ಉದ್ದೇಶದಿಂದ 1,770 ಫಲಾನುಭವಿಗಳಿಗೆ ಕಂದಾಯ ಗ್ರಾಮ ಹಕ್ಕುಪತ್ರಗಳನ್ನು ವಿತರಿಸಲಾಗಿದೆ.
ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶವು ಮೇ 19ರಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


