ತುಮಕೂರು: ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ರಾಜ್ಯ ಮಟ್ಟದ ಪಾದರಕ್ಷಾ ತಯಾರಿಕಾ ಸ್ಪರ್ಧೆಗಾಗಿ ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನೈಜ ಚರ್ಮ ಕುಶಲಕರ್ಮಿಗಳಿಗೆ ಕರಕುಶಲತೆಯ ಕೌಶಲ್ಯ ಹಾಗೂ ಪಾದರಕ್ಷೆಗಳ ತಯಾರಿಕೆಯ ನೈಪುಣ್ಯ, ಸೃಜನಶೀಲತೆ, ತಾಂತ್ರಿಕ ಕೌಶಲ್ಯವನ್ನು ಗುರುತಿಸಿ ಉತ್ತೇಜಿಸುವ ಉದ್ದೇಶದಿಂದ ಚರ್ಮ ಕುಶಲಕರ್ಮಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸುವರ್ಣ ಅವಕಾಶ ಕಲ್ಪಿಸಿ, ಸ್ಥಳದಲ್ಲೇ ಪಾದರಕ್ಷಾ ತಯಾರಿಕೆ ಸ್ಪರ್ಧೆಯನ್ನು ಆಯೋಜಿಸಲು ಉದ್ದೇಶಿಸಲಾಗಿದೆ.
ಆಸಕ್ತರು ಮೇ 30ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ, ಕೇಂದ್ರ ಕಚೇರಿ, ಬೆಂಗಳೂರು ಇವರಿಗೆ ಅಂಚೆ ಮೂಲಕ ಸಲ್ಲಿಸಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


