nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
    ಕುಣಿಗಲ್ May 21, 2026

    ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ

    By adminMay 21, 2026No Comments2 Mins Read
    dalith

    ಕುಣಿಗಲ್: ತಾಲೂಕಿನ ಬಿಳಿದೇವಾಲಯ ಗ್ರಾಮ ಪಂಚಾಯಿತಿಗೆ ಸೇರಿದ ಜಾಗದಲ್ಲಿ ಬಲಾಢ್ಯ ವ್ಯಕ್ತಿಗಳು ಅಕ್ರಮವಾಗಿ ನಿರ್ಮಾಣ ಮಾಡಿಕೊಂಡಿರುವ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ ಆ ಸ್ಥಳದಲ್ಲಿ ಗ್ರಂಥಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡುವಂತೆ ಒತ್ತಾಯಿಸಿ ತಾಲೂಕು ದಲಿತ ಸಂಘಟನೆಗಳ ಒಕ್ಕೂಟ, ಬೋರಲಿಂಗನಪಾಳ್ಯ ಗ್ರಾಮಸ್ಥರು ಇಲ್ಲಿನ ತಾಲೂಕು ಪಂಚಾಯಿತಿ ಮುಂಭಾಗ ತಮಟೆ ಹೊಡೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಂತರ ತಾಪಂ ಇಒ ವಸಂತ್ ಕುಮಾರ್‌ಗೆ ಮನವಿ ಸಲ್ಲಿಸಿ, ಒತ್ತುವರಿ ತೆರವಿಗೆ ಆಗ್ರಹಿಸಿದರು.

    ಮನವಿ ಸ್ವೀಕರಿಸಿ ಮಾತನಾಡಿದ ತಾ.ಪಂ ಇಒ ವಸಂತ್‌ಕುಮಾರ್, ಗ್ರಾ.ಪಂಗೆ ಸೇರಿದ ಜಾಗದಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಅಂಗಡಿಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ ಎಂದು ಗ್ರಾ.ಪಂ ಆಡಳಿತ ಹಾಗೂ ಗ್ರಾಮಸ್ಥರಿಂದ ದೂರು ಬಂದ ಕಾರಣ ದಾಖಲೆಗಳನ್ನು ಪರಿಶೀಲಿಸಲಾಗಿ ಈ ಜಾಗ ಪಂಚಾಯ್ತಿ ಸ್ವತ್ತಾಗಿದೆ.

    ಈ ಹಿಂದೆ ಈ ಜಾಗದಲ್ಲಿ ಗ್ರಾ.ಪಂ. ಕಟ್ಟಡ ಇರುವ ಬಗ್ಗೆ ಫೋಟೋ ಸಹ ಇದೆ. ಮಳಿಗೆ ತೆರವು ಗೊಳಿಸಲಾಗುವುದು ಎಂದರು.

    ತಾ.ಪಂ. ಇಒ ವಸಂತ್‌ ಕುಮಾರ್ ಮಾತನಾಡಿ, ಪೊಲೀಸರ ರಕ್ಷಣೆಯೊಂದಿಗೆ ಅಂಗಡಿ ಮಳಿಗೆಗಳನ್ನು ಗ್ರಾ.ಪಂ ವಶಕ್ಕೆ ಪಡೆದು, ಬೀಗ ಮುದ್ರೆ ಹಾಕಲಾಗಿತ್ತು. ಆದರೆ ಮೂರು ತಿಂಗಳ ನಂತರ ಮತ್ತೆ ಒತ್ತುವರಿದಾರರು ಅಕ್ರಮ ಪ್ರವೇಶ ಮಾಡಿ ಬೀಗ ಮುದ್ರೆ ಹೊಡೆದಿದ್ದಾರೆ. ವ್ಯಕ್ತಿಗಳು ಗೊತ್ತಿದ್ದೋ, ಗೊತ್ತಿಲ್ಲದೆಯೋ ಅಧಿಕಾರಿಗಳು ಹಾಕಿದ್ದ ಬೀಗ ಮುದ್ರೆ ಹೊಡೆದಿದ್ದಾರೆ ಎಂದು, ಆ ವ್ಯಕ್ತಿಗಳನ್ನು ಕಚೇರಿಗೆ ಬರ ಮಾಡಿಕೊಂಡು ಬೀಗ ಮುದ್ರೆ ಹೊಡೆದಿದ್ದು ತಪ್ಪು, ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ ಎಂದು ಮನವರಿಕೆ ಮಾಡಿದೆವು. ಆದರೆ ಆ ವ್ಯಕ್ತಿಗಳು ನಮ್ಮ ಸಲಹೆ ಒಪ್ಪಲಿಲ್ಲ. ನಮ್ಮ ಅಧಿಕಾರಿಗಳು ಸ್ಥಳಕ್ಕೆ ಹೋದರೆ ಅಂಗಡಿ ಒಳಗೆ ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ಇಟ್ಟು ಹಾಗೂ ಹೆಂಗಸರು, ಮಕ್ಕಳನ್ನು ಮುಂದೆ ಬಿಟ್ಟು ಅಂಗಡಿ ತೆರವುಗೊಳಿಸಲು ಅಡ್ಡಿ ಪಡಿಸಿರುತ್ತಾರೆ. ಪೊಲೀಸ್ ರಕ್ಷಣೆಯೊಂದಿಗೆ ಜಾಗವನ್ನು ಪಂಚಾಯ್ತಿ ವಶಕ್ಕೆ ಪಡೆದು, ಆ ಜಾಗದಲ್ಲಿ ಸಾರ್ವಜನಿಕ ಗ್ರಂಥಾಲಯವನ್ನು ಪ್ರಾರಂಭಿಸಲಾಗುವುದು ಎಂದರು.

    ಮಾಜಿ ಗ್ರಾ.ಪಂ. ಅಧ್ಯಕ್ಷ ಆನಂದ ಸ್ವಾಮಿ ಮಾತನಾಡಿ, ಬೋರಲಿಂಗನಪಾಳ್ಯ ಗ್ರಾಮದ ಗಂಗಕರಿಯಪ್ಪ, ಲಂಕೇಶ್ ಎ, ರಾಜಣ್ಣ ಪಿ. ರಾಜೇಶ್, ಸಿದ್ದಾರ್ಥ ಅನುದಾನಿತ ಪ್ರೌಢಶಾಲೆ ಸರ್ಕಾರಿ ಗ್ರೂಪ್ ಡಿ.ದರ್ಜೆ ನೌಕರ ನಾಗರಾಜು ಸೇರಿದಂತೆ ಹಲವು ವ್ಯಕ್ತಿಗಳು ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಕೊಂಡಿದ್ದಾರೆ. ಈ ಸಂಬಂಧ ಕ್ರಮಕೈಗೊಂಡು ಮಳಿಗೆಗಳನ್ನು ತೆರವು ಗೊಳಿಸುವಂತೆ ಗ್ರಾಮಸ್ಥರು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ತಾ.ಪಂ ಇಒ ವಸಂತ್ ಕುಮಾರ್, ಗ್ರಾ.ಪಂ ಅಧಿಕಾರಿಗಳು ಪೊಲೀಸರ ರಕ್ಷಣೆಯೊಂದಿಗೆ ಅಕ್ರಮ ಅಂಗಡಿ ಮಳಿಗೆಗಳನ್ನು ವಶಕ್ಕೆ ಪಡೆದು ಬೀಗಮುದ್ರೆ ಹಾಕಿದ್ದರು. ಆದರೆ ಮೇಲ್ಕಂಡ ವ್ಯಕ್ತಿಗಳು ಬೀಗ ಮುದ್ರೆಯನ್ನು ಹೊಡೆದು, ಅಕ್ರಮವಾಗಿ ಮತ್ತೆ ಅಂಗಡಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

    ಪ್ರತಿಭಟನೆಯಲ್ಲಿ ತಾ.ಪಂ ಮಾಜಿ ಸದಸ್ಯ ಎಸ್.ಟಿ.ರಾಜು, ಮುಖಂಡರಾದ ತಿಮ್ಮಪ್ಪ, ಜೈಕುಮಾರ್, ರಂಗರಾಜು, ಪ್ರಹ್ಲಾದ್, ರಮೇಶ್, ದೇವರಾಜು, ಉಳೇಹಳ್ಳಿ ರಾಜು, ಲಲಿತಮ್ಮ, ಲಕ್ಷ್ಮಮ್ಮ, ಪುಷ್ಪಲತಾ, ತಾರಾ, ಗೌರಮ್ಮ, ಅಂಜನಮ್ಮ, ಹನುಮಮ್ಮ ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ

    July 14, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.