ತುಮಕೂರು: ಸಮಾಜ ಕಲ್ಯಾಣ ಇಲಾಖೆಯಡಿ 2026–27ನೇ ಸಾಲಿಗೆ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಸಲ್ಲಿಸಲು ಜೂನ್ 30 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


